ಉಡುಪಿ: ತೆಂಕನಿಡಿಯೂರು ಗ್ರಾಪಂ ಮುಖ್ಯದ್ವಾರದ ತೆರವು ಕಾರ್ಯ ಪ್ರಶ್ನಿಸಿ ಪ್ರತಿಭಟನೆ ನಡೆಸಿದವರ ಮೇಲೆ ಪಂಚಾಯತ್ ಅಧ್ಯಕ್ಷರು ಸುಳ್ಳು ಜಾತಿ ನಿಂದನೆ ಪ್ರಕರಣ ದಾಖಲಿಸಿದ್ದಾರೆ. ಇದನ್ನು ಪಾರದರ್ಶಕವಾಗಿ ತನಿಖೆ ನಡೆಸಬೇಕು ಎಂದು ಆಗ್ರಹಿಸಿ ತೆಂಕನಿಡಿಯೂರು ಗ್ರಾಪಂ ಕಾಂಗ್ರೆಸ್ ಬೆಂಬಲಿತ ಸದಸ್ಯರು ಎಎಸ್ಪಿ ಕುಮಾರಚಂದ್ರ ಅವರಿಗೆ ಮನವಿ ಸಲ್ಲಿಸಿದರು. ಅಲ್ಲದೆ, ತಾಪಂ ಸದಸ್ಯ ಧನಂಜಯ ಕುಂದರ್ ಮತ್ತು ಇತರರಿಗೆ ಬೆದರಿಕೆ ಹಾಕಿರುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಈ ವೇಳೆ ಗ್ರಾಮ ಪಂಚಾಯತ್ ಸದಸ್ಯರಾದ ಪ್ರಖ್ಯಾತ್ ಶೆಟ್ಟಿ, ಶರತ್ ಶೆಟ್ಟಿ, ಅನುಷಾ, ಮಾಜಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಗೋಪಾಲಕೃಷ್ಣ ಶೆಟ್ಟಿ, ಮಾಜಿ ಅಧ್ಯಕ್ಷರಾದ ಯತೀಶ್ ಕರ್ಕೇರಾ, ಉಡುಪಿ ಬ್ಲಾಕ್ ಯೂತ್ ಕಾಂಗ್ರೆಸ್ ಉಪಾಧ್ಯಕ್ಷ ಹಮೀದ್, ಜಿಲ್ಲಾ ಯೂತ್ ಕಾಂಗ್ರೆಸ್ ನ ದೀಪಕ್ ಕೋಟ್ಯಾನ್ ಉಪಸ್ಥಿತರಿದ್ದರು.