ಚೆನ್ನೈ: ಖ್ಯಾತ ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ ಗೆ ಕೊರೋನಾ ಭಾಧಿಸಿದ್ದು , ಅವರ ಆರೋಗ್ಯ ಸ್ಥಿತಿ ಗಂಭೀರಗೊಂಡಿರುವ ಹಿನ್ನಲೆಯಲ್ಲಿ ಅವರಿಗೆ ವೆಂಟಿಲೇಟರ್ ಅಳವಡಿಸಲಾಗಿದೆ.
ಆಗಸ್ಟ್ 5ರಿಂದ 74 ವರ್ಷದ ಎಸ್ಪಿಬಿ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಕಳೆದ ರಾತ್ರಿ ಅವರು ಆರೋಗ್ಯ ಗಂಭೀರವಾಗಿತ್ತು. ಈ ಹಿನ್ನೆಲೆಯಲ್ಲಿ ಅವರನ್ನು ಐಸಿಯುಗೆ ಸ್ಥಳಾಂತರಿಸಿ ಲೈಫ್ ಸಪೋರ್ಟ್ ಅಳವಡಿಸಲಾಗಿದೆ.
ಈ ಹಿಂದೆ ವಿಡಿಯೋ ಮಾಡಿ ನನ್ನ ಕುಟುಂಬದ ಹಿತದೃಷ್ಟಿಯಿಂದ ನಾನು ಸ್ವಯಂ ಆಗಿ ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆಯೊಂದಿಗೆ ವಿಶ್ರಾಂತಿ ಪಡೆಯುತ್ತಿರುವುದಾಗಿ ಹೇಳಿದ್ದರು. ಇದೀಗ ತಮ್ಮ ಪ್ರಿಯ ಗಾಯಕನ ಚೇತರಿಕೆಗೆ ಅಭಿಮಾನಿಗಳು ಪ್ರಾರ್ಥಿಸಿದ್ದಾರೆ.