udupixpress
Home Trending ತೆಲುಗಿನ ಖ್ಯಾತ ಖಳನಟ ಜಯ ಪ್ರಕಾಶ್‌ ರೆಡ್ಡಿ ನಿಧನ

ತೆಲುಗಿನ ಖ್ಯಾತ ಖಳನಟ ಜಯ ಪ್ರಕಾಶ್‌ ರೆಡ್ಡಿ ನಿಧನ

ಅಮರಾವತಿ: ತೆಲುಗಿನ ಖ್ಯಾತ ಖಳನಟ ಜಯ ಪ್ರಕಾಶ್‌ ರೆಡ್ಡಿ (74) ಅವರು ಮಂಗಳವಾರ ಬೆಳಿಗ್ಗೆ ಗುಂಟೂರಿನ ತಮ್ಮ ನಿವಾಸದಲ್ಲಿ ಹೃದಯಾಘಾತದಿಂದ ನಿಧನ ಹೊಂದಿದರು.

ಜಯ ಪ್ರಕಾಶ್‌ ರೆಡ್ಡಿ ಖಳನಾಯಕ ಮತ್ತು ಹಾಸ್ಯ ಪಾತ್ರಗಳಿಗೆ ಹೆಸರುವಾಸಿಯಾಗಿದ್ದರು. ಅವರ ಅತ್ಯಂತ ಜನಪ್ರಿಯ ಚಿತ್ರಗಳಲ್ಲಿ ‘ಸಮರಸಿಂಹ ರೆಡ್ಡಿ, ಪ್ರೇಮಿಂಚುಕುಂದಮು ರಾ, ನರಸಿಂಹ ನಾಯ್ಡು, ರೆಡಿ, ಕಿಕ್, ಜಯಂ ಮನದೇರಾ, ಜಂಬಾ ಲಕಿಡಿ ಪಂಬಾ’ ಪ್ರಮುಖವಾಗಿವೆ.

ನಟನ ನಿಧನಕ್ಕೆ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಸೇರಿದಂತೆ ಹಲವು ನಟ–ನಟಿಯರು ಸಂತಾಪ ಸೂಚಿಸಿದ್ದಾರೆ.