ಅಂತಿಮ ದರ್ಶನಕ್ಕೆ ಹರಿದು ಬಂದ ಅಭಿಮಾನಿಗಳು : ರವೀಂದ್ರ ಕಲಾಕ್ಷೇತ್ರದಲ್ಲಿ ಲೀಲಾವತಿ ಪಾರ್ಥಿವ ಶರೀರ

ಬೆಂಗಳೂರು: ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನ: ರವೀಂದ್ರ ಕಲಾಕ್ಷೇತ್ರದಲ್ಲಿ ‌ಸಾರ್ವಜನಿಕರು, ಗಣ್ಯರು, ಅಭಿಮಾನಿಗಳು ಲೀಲಾವತಿ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆಯುತ್ತಿದ್ದಾರೆ. 11 ಗಂಟೆಯಿಂದ ಇಲ್ಲಿ ಪಾರ್ಥಿವ ಶರೀರದ ದರ್ಶನಕ್ಕೆ ಅನುವು ಮಾಡಿಕೊಡಲಾಗಿದೆ. ಸರಿ ಸುಮಾರು 2 ಗಂಟೆಯವರೆಗೆ ಲೀಲಾವತಿ ಅವರ ಪಾರ್ಥಿವ ಶರೀರದ ಸಾರ್ವಜನಿಕ ದರ್ಶನ ಪಡೆದುಕೊಳ್ಳಬಹುದಾಗಿದೆ. ರವೀಂದ್ರ ಕಲಾಕ್ಷೇತ್ರದಲ್ಲಿ ಬಿಗಿ ಪೊಲೀಸ್ ಬಂದ್ ಬಸ್ತೋ ಕೈಗೊಳ್ಳಲಾಗಿದೆ.ಕನ್ನಡ ಚಿತ್ರರಂಗದಲ್ಲಿ ಬಹುಕಾಲ ಛಾಪು ಮೂಡಿಸಿದ್ದ ಹಿರಿಯ ನಟಿ ಲೀಲಾವತಿ ಅವರು ನಿನ್ನೆ ಸಂಜೆ ವಯೋಸಹಜ ಕಾಯಿಲೆಯಿಂದ ಕೊನೆಯುಸಿರೆಳೆದರು. ನೆಲಮಂಗಲದ ಅಂಬೇಡ್ಕರ್​ ಮೈದಾನದಲ್ಲಿ ಅಂತಿಮ ದರ್ಶನಕ್ಕಾಗಿ ವ್ಯವಸ್ಥೆ ಮಾಡಲಾಗಿತ್ತು. ಇದೀಗ ಅಂಬೇಡ್ಕರ್​​ ಮೈದಾನದಿಂದ ‌ಲೀಲಾವತಿ ಅವರ ಪಾರ್ಥಿವ ಶರೀರವನ್ನು ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನಕ್ಕೆ ಇಡಲಾಗಿದೆ.

ರವೀಂದ್ರ ಕಲಾಕ್ಷೇತ್ರದಲ್ಲಿ ಹಿರಿಯ ನಟಿ ಲೀಲಾವತಿ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದ್ದು, ಸಾರ್ವಜನಿಕರು, ಅಭಿಮಾನಿಗಳು ಹಾಗೂ ಗಣ್ಯರು ದರ್ಶನ ಪಡೆಯುತ್ತಿದ್ದಾರೆ. ನಾಲ್ಕುವರೆ ದಶಕಗಳ ಕಾಲ ಕನ್ನಡ ಚಿತ್ರರಂಗದಲ್ಲಿ ಬಹುಬೇಡಿಕೆ ನಟಿಯಾಗಿ ಮಿಂಚಿದ್ದ ಹಿರಿಯ ನಟಿ ಲೀಲಾವತಿ ಅವರು ಬರೋಬ್ಬರಿ 600ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಕಾಣಿಸಿಕೊಂಡಿದ್ದಾರೆ. ಇವರ ಅಮೋಘ ಅಭಿನಯಕ್ಕೆ ಅಪಾರ ಸಂಖ್ಯೆಯ ಸಿನಿಪ್ರೇಮಿಗಳು ಮನಸೋತಿದ್ದರು. ಆದ್ರೆ ಕೆಲ ದಿನಗಳಿಂದ ತೀವ್ರ ಅನಾರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು. ಮನೆಯಲ್ಲೇ ಚಿಕಿತ್ಸೆ ಮುಂದುವರಿಸಲಾಗಿತ್ತು. ಚಿತ್ರರಂಗ ಸೇರಿದಂತೆ ವಿವಿಧ ಕ್ಷೇತ್ರಗಳ ಗಣ್ಯಾತಿಗಣ್ಯರು ಲೀಲಾವತಿ ಅವ ನಿವಾಸಕ್ಕೆ ಆಗಮಿಸಿ, ಆರೋಗ್ಯ ವಿಚಾರಿಸಿದ್ದರು. ಆದ್ರೆ ಶುಕ್ರವಾರ ಸಂಜೆ ಬಾರದ ಲೋಕಕ್ಕೆ ಪಯಣ ಬೆಳೆಸಿದ್ದಾರೆ.