ದೆಹಲಿಯಲ್ಲಿ ಪ್ರತಿಭಟನೆ ಮಾಡುತ್ತಿರುವ ರೈತರು ಭಯೋತ್ಪಾದಕರು: ಕೃಷಿ ಸಚಿವ ಬಿ.ಸಿ. ಪಾಟೀಲ್

ಕೊಪ್ಪಳ: ದೆಹಲಿಯಲ್ಲಿ ಪ್ರತಿಭಟನೆ ಮಾಡುತ್ತಿರುವ ರೈತರು ಭಯೋತ್ಪಾದಕರು‌ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ವಿವಾದಿತ ಹೇಳಿಕೆ ನೀಡಿದ್ದಾರೆ.

ಕೊಪ್ಪಳದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೆಹಲಿಯಲ್ಲಿ ಪ್ರತಿಭಟನೆ ಮಾಡುವ ರೈತರು ಸಂಪೂರ್ಣ ಭಯೋತ್ಪಾದಕರು. ಧರಣಿ ನಿರತ ರೈತರಿಗೆ ಬೇರೆ ಬೇರೆ ದೇಶಗಳ ಬೆಂಬಲವಿದೆ. ಹಾಗೆ ಕಾಂಗ್ರೆಸ್​ ಕೂಡ ಬೆಂಬಲವಾಗಿ ನಿಂತಿದೆ. ವಿದೆ ಎಂದು ಆರೋಪಿಸಿದರು.

ರೈತರು ಎಂದಿಗೂ ಕಾನೂನು ಕೈಗೆ ತೆಗೆದುಕೊಂಡವರಲ್ಲ. ಆದರೆ, ದೆಹಲಿ ರೈತ ಪ್ರತಿಭಟನಾಕಾರರು ಕೆಂಪುಕೋಟೆ ಬಳಿ ಹೋಗಿ ಬಾವುಟ ಹಾರಿಸಿದ್ದಾರೆ. ಇದನ್ನು ನೋಡಿದಾಗ ಇವರಿಗೆ ವಿದೇಶಗಳ ಬೆಂಬಲ ಇರುವುದು ಸ್ಪಷ್ಟವಾಗುತ್ತದೆ. ಇದೊಂದು ಭಯೋತ್ಪಾದಕ ಕೃತ್ಯ ಎಂದು ಹೇಳುವ ಮೂಲಕ ಸಚಿವರು ವಿವಾದ ಮೈಮೇಲೆ ಎಳೆದುಕೊಂಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಜನಪ್ರಿಯತೆ ಕಂಡು ಕಾಂಗ್ರೆಸ್​ನವರು ಹತಾಶರಾಗಿದ್ದಾರೆ. ಮೋದಿ ಸರ್ಕಾರ ಅಲುಗಾಡಿಸಲು ಸಾಧ್ಯವಿಲ್ಲ ಅಂದುಕೊಂಡವರು, ಭಯೋತ್ಪಾದಕರನ್ನು ಕರೆತಂದು ಅವರಿಗೆ ರೈತರ ಹೆಸರಿಟ್ಟು ಭಯೋತ್ಪಾದನೆ ಮಾಡಿಸಿದ್ದಾರೆ. ನಾವು ಇದನ್ನು ಖಂಡಿಸುತ್ತೇವೆ. ಯಾರೇ ಕಾನೂನು ಕೈಗೆ ತಗೆದುಕೊಂಡರು ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವದು ಎಂದು ಎಚ್ಚರಿಕೆ ನೀಡಿದರು.