ಫೆ.20: ಜಿಲ್ಲೆಯಲ್ಲಿ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರ ಪ್ರವಾಸ

ಉಡುಪಿ: ವಿಧಾನ ಪರಿಷತ್ತಿನ ವಿರೋಧ ಪಕ್ಷದ ಶಾಸಕ ಕೋಟ ಶ್ರೀನಿವಾಸ ಪೂಜಾರಿ ಫೆಬ್ರವರಿ
20 ರಂದು ಉಡುಪಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಅಂದು ಬೆಳಗ್ಗೆ 10.30ಕ್ಕೆ ಕೆ.ಎಂ.ಸಿ ಮಣಿಪಾಲದಲ್ಲಿ ಹೋಮ್ ಕೇರ್ ಸರ್ವೀಸಸ್ ಉದ್ಘಾಟನಾ ಕಾರ್ಯಕ್ರಮ, ಮಧ್ಯಾಹ್ನ 12 ಕ್ಕೆ ಕೋಟೇಶ್ವರ ಪದವಿ ಪೂರ್ವ ಕಾಲೇಜಿನ ಸಮಾರಂಭದಲ್ಲಿ ಭಾಗವಹಿಸಿ ನಂತರ ಕಾರವಾರಕ್ಕೆ ತೆರಳುವರು.