ಉಡುಪಿ: ಬಿಜೆಪಿ ಉಡುಪಿ ಜಿಲ್ಲಾ ಘಟಕದ ನೂತನ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅವರ ಪದಗ್ರಹಣ ಸಮಾರಂಭ ಹಾಗೂ ಸಂಕಲ್ಪ ಸಮಾವೇಶ ಫೆ. 24ರಂದು ಸಂಜೆ 4 ಗಂಟೆಗೆ ಉಡುಪಿ ಕಿದಿಯೂರು ಹೋಟೆಲ್ ಶೇಷಶಯನ ಸಭಾಂಗಣದಲ್ಲಿ ನಡೆಯಲಿದೆ.
ಕಡಿಯಾಳಿ ಬಿಜೆಪಿ ಕಚೇರಿಯಲ್ಲಿ ಶನಿವಾರ ಕರೆದ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ನೂತನ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಅಂದು 3.30ಕ್ಕೆ ಹಳೆಯ ಡಯಾನ್ ಸರ್ಕಲ್ನಿಂದ ಕಿದಿಯೂರು ಹೋಟೆಲ್ವರೆಗೆ ಮೆರವಣಿಗೆ ಜರುಗಲಿದೆ.
ಸಮಾವೇಶದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಉಸ್ತುವಾರಿ ಸಚಿವರು, ಉಭಯ ಜಿಲ್ಲೆಯ ಶಾಸಕರು, ಸಂಸದರುಭಾಗವಹಿಸುವರು. ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರದ ಒಂದು ಸಾವಿರ ಬೂತ್ಗಳಿಂದ 12 ಸಾವಿರ ಕಾರ್ಯಕರ್ತರು ಪಾಲ್ಗೊಳ್ಳುವರು ಎಂದರು.
ಇದೇ ಸಂದರ್ಭದಲ್ಲಿ ಕರಾವಳಿ ಪ್ರಾಧಿಕಾರದ ಅಧ್ಯಕ್ಷರಾಗಿ ನೇಮಕವಾದ ಮಟ್ಟಾರು ರತ್ನಾಕರ ಹೆಗ್ಡೆ ಅವರನ್ನು ಸನ್ಮಾನಿಸಲಾಗುವುದು. ಶಕ್ತಿಕೇಂದ್ರ, ಮಹಾಶಕ್ತಿ ಕೇಂದ್ರ, ಮಂಡಲದ ಪದಾಧಿಕಾರಿಗಳಿಗೆ ಹಾಗೂ 12 ಸಾವಿರ ಕಾರ್ಯಕರ್ತರಿಗೆ ಸಂಕಲ್ಪ ವಿಧಿಬೋಧಿಸಲಾಗುವುದು ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಮುಖಂಡರಾದ ಕುತ್ಯಾರು ನವೀನ್ ಶೆಟ್ಟಿ, ರೋಶನ್ ಶೆಟ್ಟಿ, ಶ್ರೀಶ ನಾಯಕ್, ಪ್ರತಾಪ್ ಶೆಟ್ಟಿ, ಗುರುಪ್ರಸಾದ್ ಶೆಟ್ಟಿ, ಶಿವಕುಮಾರ್
ಅಂಬಲಪಾಡಿ ಇದ್ದರು.