ಫೆ. 9 ಹಿರಿಯಡ್ಕ ಕಾಲೇಜು‌, ಹಿರಿಯ ವಿದ್ಯಾರ್ಥಿ ಸಂಘದ ವಾರ್ಷಿಕೋತ್ಸವ  ವಿವಿಧ ಸಾಧಕರಿಗೆ ಸಮ್ಮಾನ

ಉಡುಪಿ: ಹಿರಿಯ ವಿದ್ಯಾರ್ಥಿ ಸಂಘ ಸರಕಾರಿ ಪ್ರಥಮ ದರ್ಜೆ ಕಾಲೇಜು ಹಿರಿಯಡ್ಕ ಇದರ ಹತ್ತನೇ ವರ್ಷದ ವಾರ್ಷಿಕೋತ್ಸವ ಸಮಾರಂಭವು ಫೆ. 9ರಂದು  ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಯಲಿದೆ.
ವಾರ್ಷಿಕೋತ್ಸವದ ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ಅಜೆಕಾರು ಪದ್ಮಗೋಪಾಲ ಎಜ್ಯುಕೇಶನ್ ಟ್ರಸ್ಟ್ ಅಧ್ಯಕ್ಷ ಡಾ| ಸುಧಾಕರ್ ಶೆಟ್ಟಿ ನೆರವೇರಿಸಲಿದ್ದಾರೆ. ಕಾಲೇಜಿನ ಪ್ರಾಂಶುಪಾಲೆ ಡಾ| ನಿಕೇತನ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶಾಸಕ ಲಾಲಾಜಿ ಆರ್ ಮೆಂಡನ್, ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಮತ್ತಿತರರು ಭಾಗವಹಿಸಲಿದ್ದಾರೆ.
ಸಭಾ ಕಾರ್ಯಕ್ರಮದ ಅನಂತರ ಸಾಂಸ್ಕೃತಿಕ ಕಾರ್ಯಕ್ರಮಗಳಾದ ನೃತ್ಯ-ಗಾನ-ಹಾಸ್ಯ ಮನೋರಂಜನ ಕಾರ್ಯಕ್ರಮಗಳು ಹಿರಿಯ ವಿದ್ಯಾರ್ಥಿಗಳು ಹಾಗೂ ಪ್ರಖ್ಯಾತ ಕಲಾವಿದರಿಂದ ನಡೆಯಲಿದೆ.
ಸಾಧಕರಿಗೆ ಸನ್ಮಾನ:
ಕಾರ್ಯಕ್ರಮದಲ್ಲಿ ವಿವಿಧ ಸಾಧಕರಿಗೆ ಸಮ್ಮಾನ‌ ನಡೆಯಲಿದೆ‌. ಸಮಾಜ ಸೇವಕ ಶ್ರೀ ಸೂರಿ ಶೆಟ್ಟಿ, ಯಕ್ಷಗಾನ‌ ಕಲಾವಿದ ಶ್ರೀ ಅರುಣ್ ಕುಮಾರ್ ಜಾರ್ಕಳ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರು ಶತಾಯುಷಿ ಗುರುವ, ರಂಗಭೂಮಿ ಮತ್ತು ಸಿನಿಮಾ ನಟಿ ಸುಜಾತ ಶೆಟ್ಟಿ, ಮಹಾಭಾರತ ಕಲಾವಿದೆ ಆರಾಧನಾ ಭಟ್ ಅವರಿಗೆ ಸಮ್ಮಾನ‌ ನಡೆಯಲಿದೆ.