ಫೆ.27: ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ ಉದ್ಘಾಟನೆ

ಉಡುಪಿ: ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ರೋಟರಿ ಕ್ಷಬ್ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮದ ಉದ್ಘಾಟನೆಯು ಫೆಬ್ರವರಿ 27 ರಂದು ಬೆಳಗ್ಗೆ 8 ಗಂಟೆಗೆ ನಗರದ ಸರಕಾರಿ ಕೂಸಮ್ಮ ಶಂಭು ಶೆಟ್ಟಿ ಮೆಮೋರಿಯಲ್ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ನಡೆಯಲಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.