ಉಡುಪಿ: ಉಡುಪಿ ಜಿಲ್ಲಾ ಮರಾಟಿ ಸೇವಾ ಸಂಘ, ಜಿಲ್ಲಾ ಮರಾಟಿಮಹಿಳಾ ವೇದಿಕೆ, ಜಿಲ್ಲಾ ಮರಾಟಿ ಯುವ ಸಂಘಟನೆ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಚಂಡೀಗಢ ಸರಕಾರದ ಮುಖ್ಯ ಕಾರ್ಯದರ್ಶಿ ಎಚ್. ರಾಜೇಶ್ ಪ್ರಸಾದ್ ಅವರಿಗೆ ಅಭಿನಂದನಾ ಸಮಾರಂಭವನ್ನು ಇದೇ ಡಿ.21ರ ಭಾನುವಾರದಂದು ಬೆಳಿಗ್ಗೆ 10ಗಂಟೆಗೆ ಉಡುಪಿ ಕುಂಜಿಬೆಟ್ಟುವಿನ ಶ್ರೀ ತುಳಜಾ ಭವಾನಿ ಮರಾಟಿ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಉಡುಪಿ ಜಿಲ್ಲಾ ಮರಾಟಿ ಸೇವಾ ಸಂಘದ ಅಧ್ಯಕ್ಷ ಕೆ.ಟಿ. ನಾಯ್ಕ್ ತಿಳಿಸಿದರು.
ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಭಿನಂದನಾ ಸಮಾರಂಭಕ್ಕೂ ಮೊದಲು ಅಂದು ಬೆಳಿಗ್ಗೆ 8:30ಕ್ಕೆ ರಾಜೇಶ್ ಪ್ರಸಾದ್ ಅವರನ್ನು ಪರ್ಕಳದ ಸ್ವಗೃಹದಿಂದ ವಾಹನ ಜಾಥಾದ ಮೂಲಕ ಕುಂಜಿಬೆಟ್ಟಿನ ಎಂ.ಜಿ.ಎಂ. ಮೈದಾನಕ್ಕೆ ಕರೆದುಕೊಂಡು ಬರಲಾಗುವುದು. ಅಲ್ಲಿಂದ ತೆರದ ವಾಹನದಲ್ಲಿ ಚೆಂಡೆ, ಕೊಂಬು ಹಾಗೂ ಪೂರ್ಣಕುಂಭ ಮೇಳದೊಂದಿಗೆ ಅದ್ಧೂರಿ ಮೆರವಣಿಗೆ ಮೂಲಕ ಸಮುದಾಯ ಭವನಕ್ಕೆ ಸ್ವಾಗತಿಸಲಾಗುವುದು ಎಂದರು.
ಉಡುಪಿ- ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ, ಉಡುಪಿ ಶಾಸಕ ಯಶ್ ಪಾಲ್ ಸುವರ್ಣ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಮಾಜಿ ಶಾಸಕ ರಘುಪತಿ ಭಟ್ ಮೊದಲಾದವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ತಿಳಿಸಿದರು.ಸುದ್ದಿಗೋಷ್ಠಿಯಲ್ಲಿ ಮರಾಟಿ ಸಮಾಜದ ಮುಖಂಡರಾದ ಉಮೇಶ್ ನಾಯ್ಕ್ ಚೇರ್ಕಾಡಿ, ಭುಜಂಗ್ ನಾಯ್ಕ್ ಇದ್ದರು.
















