ಕಾಪು: ಕೆ.ಪಿ.ಸಿ.ಸಿ ಅಲ್ಪಸಂಖ್ಯಾತ ಕಾರ್ಯದರ್ಶಿಯಾಗಿ ಬಡ್ತಿ ಹೊಂದಿದ ಫಾರೂಕ್ ಚಂದ್ರನಗರ ಇವರಿಗೆ ಸನ್ಮಾನ

ಕಾಪು: ಕಾಪು ತಾಲೂಕು ಮುಸ್ಲಿಂ ಮುಖಂಡರಿಂದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕಕ್ಕೆ ರಾಜ್ಯ ಕಾರ್ಯದರ್ಶಿಯಾಗಿ ಬಡ್ತಿ ಹೊಂದಿದ ಫಾರೂಕ್ ಚಂದ್ರನಗರ ಇವರ ಸನ್ಮಾನ ಕಾರ್ಯಕ್ರಮವನ್ನು ಬಟರ್ ಫ್ಲೈ ಗೆಸ್ಟ್ ಹೌಸ್ ನಲ್ಲಿ ನೂರಾರು ಗಣ್ಯರ ಸಮ್ಮುಖದಲ್ಲಿ ಮಾಡಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಕೆ.ಪಿ.ಸಿ.ಸಿ ವಕ್ತಾರ ಅಬ್ದುಲ್ ಮುನೀರ್, ಫಾರೂಕ್ ಚಂದ್ರನಗರ ಇವರು ಕಾಂಗ್ರೆಸ್ ಪಕ್ಷದಲ್ಲಿ 18 ವರ್ಷದಿಂದ ಸಾಮಾನ್ಯ ಕಾರ್ಯಕರ್ತರಾಗಿ, ಬೂತ್ ಮಟ್ಟದಿಂದ ರಾಜ್ಯ ಮಟ್ಟದವರೆಗೆ ಹಲವಾರು ಹುದ್ದೆಯನ್ನು ಯಶಸ್ವಿಯಾಗಿ ನಿರ್ವಹಿಸಿದ್ದಾರೆ. ಈ ಮೊದಲು 2 ಬಾರಿ ಕೆಪಿಸಿಸಿ ಅಲ್ಪ ಸಂಖ್ಯಾತ ಸದಸ್ಯರಾಗಿ ಇದೀಗ ಕಾರ್ಯದರ್ಶಿಯಾಗಿ ಬಡ್ತಿ ಹೊಂದಿದ್ದು ಮುಂದೆಯೂ ಪಕ್ಷದಲ್ಲಿ ಇನ್ನೂ ಉತ್ತಮ ಕೆಲಸ ಮಾಡಿ ಅತ್ಯುನ್ನತ ಹಂತಕ್ಕೆ ತಲುಪಲಿ ಎಂದು ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಕೆಪಿಸಿಸಿ ಕೋ-ಆರ್ಡಿನೆಟರ್ ಅಬ್ದುಲ್ ಅಝೀಜ್ ಹೆಜಮಾಡಿ, ಕಾಪು ಬ್ಲಾಕ್ ಕಾಂಗ್ರೆಸ್ ಅಲ್ಪ ಸಂಖ್ಯಾತ ಅಧ್ಯಕ್ಷ ಶರ್ಫುದ್ದಿನ್ ಶೇಕ್ ಮಜೂರು, ಕಾಪು ಬ್ಲಾಕ್ ಯೂತ್ ಕಾಂಗ್ರೆಸ್ ಅಧ್ಯಕ್ಷ ರಮೀಜ್ ಹುಸೈನ್ ಪಡುಬಿದ್ರೆ,ಕಾಪು ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷ ಯು.ಸಿ ಶೇಖಬ್ಬ,ಕಾಪು ಪುರಸಭೆ ಮಾಜಿ ಉಪಾಧ್ಯಕ್ಷ ಉಸ್ಮಾನ್ ಕೊಪ್ಪಲಂಗಡಿ, ಉಡುಪಿ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಕಾರ್ಯದರ್ಶಿ ಶಂಶುದ್ಧಿನ್ ಮಜೂರು, ಪೊಲಿಪು ಜಾಮಿಯಾ ಮಸ್ಜಿದ್ ಅಧ್ಯಕ್ಷ ಹೆಚ್. ಅಬ್ದುಲ್ಲ, ಕಾಂಗ್ರೆಸ್ ಮುಖಂಡ ಮನ್ಸೂರ್ ಮೆಕ್ಕಾಸ್ ಮೂಳೂರು,ಕಾಪು ಮುಸ್ಲಿಂ ಒಕ್ಕೂಟ ಅಧ್ಯಕ್ಷ ನಸೀರ್ ಕೊಂಬಗುಡ್ಡೆ, ಶಿರ್ವ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಹಸನಬ್ಬ ಶೇಕ್,ಕಾಪು ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಮಿರ್ ಮೊಹಮ್ಮದ್, ಕಾಪು ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ಝುಬೈರ್ ಅಹ್ಮದ್ ಶಿರ್ವ, ಕಾಪು ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಇಮ್ರಾನ್ ಮಜೂರು, ಸಾಹಿತಿ-ಚಿಂತಕ ಅಶ್ರಫ್ ಕರಂದಾಡಿ, ಪಡುಬಿದ್ರೆ ಗ್ರಾಮ ಪಂಚಾಯತ್ ಮಾಜಿ ಸದಸ್ಯ ಹಸನ್ ಕಂಚಿನಡ್ಕ, ಕಾಂಗ್ರೆಸ್ ಮುಖಂಡ ರೆಹ್ಮನ್ ಹೆಜಮಾಡಿ ಹಾಗೂ ಇನ್ನಿತರರು ಉಪಸ್ಥಿತರಿದ್ದರು.