ಉಡುಪಿ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿ ವತಿಯಿಂದ ಯಶ್ ಪಾಲ್ ಸುವರ್ಣ ಅವರಿಗೆ ಅಭಿನಂದನಾ ಕಾರ್ಯಕ್ರಮ

ಉಡುಪಿ: ಉಡುಪಿ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿ ಲಿ.,ಕಿನ್ನಿಮುಲ್ಕಿ ವತಿಯಿಂದ ಸಂಸ್ಥೆಯ ಸದಸ್ಯ, ಅವಿಭಜಿತ ದಕ್ಷಿಣ ಕನ್ನಡ ಉಡುಪಿ ಜಿಲ್ಲಾ ಮೀನು ಮಾರಾಟ ಫೆಢರೇಷನ್ ಅಧ್ಯಕ್ಷ ಹಾಗೂ ಮಹಾಲಕ್ಷ್ಮೀ ಕೋ-ಆಪರೇಟಿವ್ ಬ್ಯಾಂಕ್ ನ ಅಧ್ಯಕ್ಷ, ಶಾಸಕ ಯಶ್ ಪಾಲ್ ಸುವರ್ಣ ಅವರನ್ನು ಸಂಸ್ಥೆಯ 2022-23ನೇ ಸಾಲಿನ 65ನೇ ಸರ್ವ ಸದಸ್ಯರ ವಾರ್ಷಿಕ ಮಹಾ ಸಭೆಯಲ್ಲಿ ಸನ್ಮಾನಿಸಿ, ಅಭಿನಂದಿಸಲಾಯಿತು.

ಅಭಿನಂದನೆ ಸ್ವೀಕರಿಸಿದ ಶಾಸಕರು ಸಂಸ್ಥೆಯ ಏಳಿಗೆ ಮತ್ತು ಅಭಿವೃದ್ಧಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಸಂಸ್ಥೆಯು ಇನ್ನಷ್ಟು ಎತ್ತರಕ್ಕೆ ಏರಲಿ ಎಂದು ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಅರುಣ ಕುಮಾರ್ ಶೆಟ್ಟಿ, ಉಪಾಧ್ಯಕ್ಷಎಂ.ಗಣೇಶ್ ಕಿಣಿ, ಪ್ರಧಾನ
ವ್ಯವಸ್ಥಾಪಕ ರಾಜೇಶ್ ಹೆಗ್ಡೆ, ಸಂಘದ ನಿರ್ದೇಶಕರಾದ ಇಂದು ರಮಾನಂದ ಭಟ್, ನಾರಾಯಣ ಬಲ್ಲಾಳ್, ಎಲ್ ಉಮಾನಾಥ, ದೇವದಾಸ್ ಶೆಟ್ಟಿಗಾರ್, ಯಶವಂತ ನಾಯಕ್, ರಾಧಾಕೃಷ್ಣ ಶೆಣೈ, ಮೀನಾ ಕುಮಾರಿ ಯು,
ಶ್ವೇತಾ ಜೆ ಶೆಟ್ಟಿ, ಅಬ್ದುಲ್ಲಾ ಎಚ್ ಸಾಹೇಬ್ , ಅರುಣ್ ಟಿ ಶೆಟ್ಟಿ, ಸುರೇಶ್ ನಾಯ್ಕ್ ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು ಇದರ ನಿರ್ದೇಶಕ ಹಾಗೂ ಜಿಲ್ಲಾ ಸಹಕಾರಿ ಯೂನಿಯನ್‌ನ ಅಧ್ಯಕ್ಷ ಬಿ.
ಜಯಕರ ಶೆಟ್ಟಿ ಇಂದ್ರಾಳಿ, ಹಾಗೂ ಸಂಘದ ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.