ಜ. 22 ರಂದು ಸಹಕಾರ ರತ್ನ ಜಯಕರ್ ಶೆಟ್ಟಿ ಇಂದ್ರಾಳಿಯವರಿಗೆ ಅಭಿನಂದನಾ ಸಮಾರಂಭ

ಉಡುಪಿ: ಬಡಗಬೆಟ್ಟು ಕ್ರೆಡಿಕ್ ಕೋ-ಆಪ್ ಸೊಸೈಟಿ.ಲಿ ವತಿಯಿಂದ ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತರಾದ ಲಯನ್. ಜಯಕರ್ ಶೆಟ್ಟಿ ಇಂದ್ರಾಳಿಯವರಿಗೆ ಅಭಿನಂದನಾ ಸಮಾರಂಭ ಹಾಗೂ ಸೇವಾ ಚಿಂತನ ಕಾರ್ಯಕ್ರಮವನ್ನು ಜ. 22 ಆದಿತ್ಯವಾರದಂದು ಬೆಳಗ್ಗೆ 9 ಗಂಟೆಗೆ ಮಿಷನ್ ಕಂಪೌಂಡ್ ರಸ್ತೆಯಲ್ಲಿರುವ ಬಾಸೆಲ್ ಮಿಷನರೀಸ್ ಮೆಮೋರಿಯಲ್ ಆಡಿಟೋರಿಯಂನಲ್ಲಿ ಹಮ್ಮಿಕೊಳ್ಳಲಾಗಿದೆ.

ಅದಮಾರು ಮಠದ ಶ್ರೀ ಈಶಪ್ರಿಯತೀರ್ಥ ಸ್ವಾಮಿಜಿಯವರ ದಿವ್ಯ ಉಪಸ್ಥಿತಿಯಲ್ಲಿ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಅಧ್ಯಕ್ಷ ಡಾ.ಎಂ.ಎನ್ ರಾಜೇಂದ್ರಕುಮಾರ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಬಡಗಬೆಟ್ಟು ಕ್ರೆಡಿಟ್ ಕೊ-ಆಪ್ ಸೊಸೈಟಿಯ ಅಧ್ಯಕ್ಷ ಸಂಜೀವ ಕಾಂಚನ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.

ದ.ಕ ಹಾಗೂ ಉಡುಪಿ ಜಿಲ್ಲಾ ಮೀನು ಮಾರಾಟ ಫೆಡರೇಶನ್ ನ ಅಧ್ಯಕ್ಷ ಯಶ್ ಪಾಲ್ ಸುವರ್ಣ ಇವರಿಗೆ ವಿಶೇಷ ಸನ್ಮಾನ ಕಾರ್ಯವನ್ನು ಕೈಗೊಳ್ಳಲಾಗುವುದು ಎಂದು ಪ್ರಕಟಣೆ ತಿಳಿಸಿದೆ.