ಫೈಲ್, ಪೇಪರ್ ಬ್ಯಾಗ್ ಮೇಕಿಂಗ್ ತರಬೇತಿ ಸಮಾರೋಪ

ಉಡುಪಿ: ಜಿಲ್ಲಾ ಪಂಚಾಯತ್ ಉಡುಪಿ, ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ, ತಾಲೂಕು ಪಂಚಾಯತ್ ಬ್ರಹ್ಮಾವರ, ರುಡ್ಸೆಟ್ ಸಂಸ್ಥೆ ಬ್ರಹ್ಮಾವರ ಹಾಗೂ ಪಾಂಡೇಶ್ವರ ಗ್ರಾಮ ಪಂಚಾಯತ್ ಸಹಯೋಗದಲ್ಲಿ ಸ್ನೇಹ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟದ ಮಹಿಳೆಯರಿಗೆ ಫೈಲ್ ಮೇಕಿಂಗ್ ಮತ್ತು ಪೇಪರ್ ಬ್ಯಾಗ್ ಮೇಕಿಂಗ್ ತರಬೇತಿಯ ಸಮಾರೋಪ ಸಮಾರಂಭವು ಇಂದು ಪಾಂಡೇಶ್ವರ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.

ಜಿಲ್ಲಾ ಪಂಚಾಯತ್ ಸಹಾಯಕ ಯೋಜನಾಧಿಕಾರಿ ಜೇಮ್ಸ್ ಡಿ ಸಿಲ್ವಾ ಮಾತನಾಡಿ, ಸಂಜೀವಿನಿ ಮಹಿಳೆಯರು ಇಂತಹ ತರಬೇತಿ ಪಡೆದು ಒಗ್ಗಟ್ಟಾಗಿ ಗುಂಪು ಚಟುವಟಿಕೆ ಮಾಡುವ ಮೂಲಕ ಉದ್ದಿಮೆಶೀಲ ಮಹಿಳೆಯರಾಗಿ ಹೊರಹೊಮ್ಮಬೇಕು ಎಂದರು.

ಎನ್.ಆರ್.ಎಲ್.ಎಂ ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕ ಪ್ರಭಾಕರ ಆಚಾರ್ ಮಾತನಾಡಿ, ಸಂಜೀವಿನಿ ಸಂಘದ ಮಹಿಳೆಯರು ಸಮಾನವ್ಯತೆಯಿಂದ ಕೆಲಸ ಮಾಡುವ ಮೂಲಕ ಸಂಜೀವಿನಿ ಉತ್ಪನ್ನಗಳು ದೇಶದಾದ್ಯಂತ ಪ್ರಚಲಿತವಾಗಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಾಂಡೇಶ್ವರ ಗ್ರಾಮ ಪಂಚಾಯತ್ ಅಧ್ಯಕ್ಷ ಕಲ್ಪನಾ ದಿನಕರ್ ವಹಿಸಿದ್ದರು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಸಿಲ್ವೆಸ್ಟರ್ ಡಿ ಸೋಜ, ಸದಸ್ಯರಾದ ಪ್ರತಾಪ್ ಶೆಟ್ಟಿ, ಚಂದ್ರ ಮೋಹನ್ ವೈ.ಬಿ, ರಾಘವೇಂದ್ರ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಇನಾಯತ್, ಗ್ರಾಮ ಪಂಚಾಯತ್ ಕಾರ್ಯದರ್ಶಿ ವಿಜಯಾ, ಎನ್.ಆರ್.ಎಲ್.ಎಂ ಜಿಲ್ಲಾ ವ್ಯವಸ್ಥಾಪಕಿ ನವ್ಯಾ, ಒಕ್ಕೂಟದ ಅಧ್ಯಕ್ಷೆ ಶ್ರೀದೇವಿ, ರುಡ್‌ಸೆಟ್ ಸಂಸ್ಥೆಯ ನಿರ್ದೇಶಕ ಪಾಪನಾಯಕ್, ಉಪನ್ಯಾಸಕ ಸಂತೋಷ್, ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕ ಕೃಷ್ಣ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ತರಬೇತಿ ಪಡೆದ ಸಂಜೀವಿನಿ ಸಂಘದ ಮಹಿಳೆಯರಿಗೆ ಪ್ರಮಾಣ ಪತ್ರ ಮತ್ತು ಕಿಟ್ ವಿತರಿಸಲಾಯಿತು. ತರಬೇತುದಾರರಾದ ಸುಮತಿ ಮತ್ತು ಸಂತೋಷ್ ಶೆಟ್ಟಿ ಯವರನ್ನು ಸನ್ಮಾನಿಸಲಾಯಿತು.

ಪುಸ್ತಕ ಬರಹಗಾರ್ತಿ ಉಷಾ ನಿರೂಪಿಸಿದರು. ವಿದ್ಯಾ ಸ್ವಾಗತಿಸಿ, ಸಂಧ್ಯಾ ವಂದಿಸಿದರು.