ಚಿತ್ರ ನಟ ಯಶ್ ಬಸ್ರೂರು ಶ್ರೀ ಮಹಾಲಸಾ ನಾರಾಯಣೀ ದೇವಳಕ್ಕೆ ಭೇಟಿ

ಕುಂದಾಪುರ: ಚಿತ್ರ ನಟ ರಾಕಿಂಗ್ ಸ್ಟಾರ್ ಯಶ್ ಅವರು ಇತಿಹಾಸ ಪ್ರಸಿದ್ಧ ಬಸ್ರೂರು ಶ್ರೀ ಮಹಾಲಸಾ ನಾರಾಯಣೀ ದೇವಸ್ಥಾನದ ಬ್ರಹ್ಮರಥೋತ್ಸವ ಸಂದರ್ಭದಲ್ಲಿ ಶನಿವಾರ ದೇವಳಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದರು.

ಅವರನ್ನು ಆಡಳಿತ ಮಂಡಳಿಯ ವತಿಯಿಂದ ಸ್ವಾಗತಿಸಿ, ಶಾಲು ಹೊದಿಸಿ, ದೇವಿಯ ಪ್ರಸಾದ ನೀಡಿ ಸನ್ಮಾನಿಸಲಾಯಿತು. 

ಈ ಸಂದರ್ಭದಲ್ಲಿ ಆಡಳಿತ ಮಂಡಳಿಯ ಸದಸ್ಯರು, ದೇವಳದ ಅರ್ಚಕರು ತಾಂತ್ರಿಕ ವರ್ಗದವರು ಮತ್ತಿತರ ಭಕ್ತಾದಿಗಳು ಉಪಸ್ಥಿತರಿದ್ದರು.