ಉಡುಪಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮೇ 14ರಂದು ಉಡುಪಿ ಶ್ರೀ ಕೃಷ್ಣ ಮಠ, ಕೊಲ್ಲೂರು ಮೂಕಾಂಬಿಕ ದೇವಸ್ಥಾನಕ್ಕೆ ಭೇಟಿ ನೀಡುವರು.
ಮೇ 13ರಂದು ದೆಹಲಿಯಿಂದ ಬೆಂಗಳೂರಿಗೆ ಆಗಮಿಸಲಿದ್ದು, ಶನಿವಾರ ಮುಂಜಾನೆ ಉಡುಪಿ ಶ್ರೀ ಕೃಷ್ಣ ಮಠ, ಕೊಲ್ಲೂರು ಮೂಕಾಂಭಿಕೆ ದೇವಿಯ ದರ್ಶನ ಪಡೆಯಲಿದ್ದಾರೆ. ಹಾಗೂ ದೇಗುಲ ಭೇಟಿಯ ಬಳಿಕ ಖಾಸಗಿ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದು, ಅಂದು ರಾತ್ರಿ ಬೆಂಗಳೂರಿಗೆ ಪ್ರಯಾಣಿಸಲಿದ್ದಾರೆ.