ಉಡುಪಿ: ಪತ್ರಿಕೋದ್ಯಮದಲ್ಲಿ ಪದವಿ ಪಡೆದ ಪರಿಶಿಷ್ಟ ಜಾತಿ ನಿರುದ್ಯೋಗಿ ಯುವಕ-ಯುವತಿಯರು ಎಲೆಕ್ಟ್ರಾನಿಕ್ಸ್ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಉದ್ಯಮವನ್ನು ಸ್ಥಾಪಿಸಲು ಘಟಕ ವೆಚ್ಚದ ಶೇ.70 ರಷ್ಟು ಅಥವಾ ಗರಿಷ್ಟ 5 ಲಕ್ಷ ರೂ.ಗಳ ಸಹಾಯಧನ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ ಉಡುಪಿ, ಕಾರ್ಕಳ ಹಾಗೂ ಕುಂದಾಪುರ ಕಚೇರಿಗಳಿಂದ ಪಡೆದು ಭರ್ತಿ ಮಾಡಿ, ದೃಢೀಕೃತ ಅಗತ್ಯ ದಾಖಲೆಗಳೊಂದಿಗೆ ಜುಲೈ 31 ರ ಒಳಗಾಗಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಛೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.















