ಪುಣೆ: ಕೋವಿಶೀಲ್ಡ್ ಲಸಿಕೆ ಉತ್ಪಾದಿಸುತ್ತಿರುವ ಪುಣೆಯ ಸೆರಮ್ ಇನ್ ಸ್ಟಿಟ್ಯೂಟ್ ಆಫ್ ಇಂಡಿಯಾದ ಕಟ್ಟಡದಲ್ಲಿ ಇಂದು ಮಧ್ಯಾಹ್ನದ ಸುಮಾರಿಗೆ ಅಗ್ನಿ ಅವಘಡ ಸಂಭವಿಸಿದೆ.
10 ಅಗ್ನಿಶಾಮಕ ವಾಹನಗಳಿಂದ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಯುತ್ತಿದೆ. ಸೆರಮ್ ಸಂಸ್ಥೆಯ ಎರಡನೇ ಮಹಡಿಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಇದು ಸೆರಮ್ ಇನ್ಸ್ಟಿಟ್ಯೂಟ್ನ ಹೊಸ ಘಟಕ ಎನ್ನಲಾಗಿದೆ.
ಮಧ್ಯಾಹ್ನ 2 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದ್ದು, ಅಗ್ನಿ ಅವಘಡಕ್ಕೆ ಕಾರಣ ಏನು ಎನ್ನುವ ವಿಚಾರ ಇನ್ನೂ ತಿಳಿದು ಬಂದಿಲ್ಲ. ಸದ್ಯ, ಬೆಂಕಿ ನಂದಿಸುವ ಕಾರ್ಯ ಪ್ರಗತಿಯಲ್ಲಿದೆ.
ಲಸಿಕೆ ಉತ್ಪಾದನಾ ಘಟಕ ಸುರಕ್ಷಿತವಾಗಿದೆ. ಬೆಂಕಿ ಆಕಸ್ಮಿಕದಿಂದ ಲಸಿಕೆ ಉತ್ಪಾದನೆಗೆ ಯಾವುದೇ ತೊಂದರೆ ಇಲ್ಲ ಎಂದು ಮೂಲಗಳಿಂದ ತಿಳಿದುಬಂದಿದೆ.