ಹೈದರಾಬಾದ್: ತೆಲಂಗಾಣದ ಶ್ರೀಶೈಲಂ ಹೈಡ್ರೊಎಲೆಕ್ಟ್ರಿಕ್ ಘಟಕದಲ್ಲಿ ಸಂಭವಿಸಿದ ಅಗ್ನಿದುರಂತದಲ್ಲಿ ಸಿಲುಕಿಕೊಂಡಿದ್ದ 9 ಮಂದಿ ಸಿಬ್ಬಂದಿ ಕೂಡ ಮೃತಪಟ್ಟಿದ್ದು, ಇಬ್ಬರು ಸಹಾಯಕ ಎಂಜಿನಿಯರ್ಗಳ ಮೃತದೇಹಗಳನ್ನು ರಕ್ಷಣಾ ತಂಡಗಳು ಹೊರತೆಗೆದಿದೆ.
ಕೇಂದ್ರ ಕೈಗಾರಿಕಾ ಭದ್ರತಾ ಪಡೆಯ ಸಿಬ್ಬಂದಿ ಸಹ ರಕ್ಷಣಾ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದಾರೆ. ಐದು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿವೆ. ಸುರಂಗದಿಂದ ಈಗಲೂ ಹೊಗೆಹೊರಬರುತ್ತಿದ್ದು, ಹೊಗೆ ಪ್ರಮಾಣ ಕಡಿಮೆ ಮಾಡುವ ಪ್ರಯತ್ನಗಳು ಸಾಗಿವೆ. ತೆಲಂಗಾಣ-ಆಂಧ್ರ ಪ್ರದೇಶ ಗಡಿಯಲ್ಲಿರುವ ಈ ಹೈಡ್ರೊಎಲೆಕ್ಟ್ರಿಕ್ ಘಟಕದಲ್ಲಿ ಗುರುವಾರ ರಾತ್ರಿ ಶಾರ್ಟ್ ಸರ್ಕೀಟ್ ಕಾರಣದಿಂದ ಬೆಂಕಿ ಅವಘಡ ಸಂಭವಿಸಿತ್ತು.