ಉಡುಪಿ: ನಗರದ ಆದಿ ಉಡುಪಿ ಸಂತೆ ಮಾರ್ಕೆಟ್ನಲ್ಲಿರುವ ಹಣ್ಣು–ಹಂಪಲು ಸಂಗ್ರಹ ಅಂಗಡಿಗೆ ಭಾನುವಾರ ಬೆಳಿಗ್ಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಲಕ್ಷಾಂತರ ರೂಪಾಯಿ ಮೌಲ್ಯದ ಆಸ್ತಿ ಹಾನಿಯಾಗಿದೆ.
ಅಂಗಡಿಯಲ್ಲಿ ಸಂಗ್ರಹಿಸಲಾಗಿದ್ದ ಹಣ್ಣು–ಹಂಪಲುಗಳ ಬಾಕ್ಸ್ಗಳಿಗೆ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ತಗುಲಿರಬಹುದು ಎಂದು ಶಂಕಿಸಲಾಗಿದೆ. ಬೆಂಕಿ ಕ್ಷಣಾರ್ಧದಲ್ಲಿ ವ್ಯಾಪಿಸಿ ಅಂಗಡಿಯ ಒಳಭಾಗವನ್ನು ಆವರಿಸಿದ್ದರಿಂದ ಅಲ್ಲಿದ್ದ ಹಣ್ಣು–ಹಂಪಲು ಹಾಗೂ ಇತರೆ ಸಾಮಗ್ರಿಗಳು ಸುಟ್ಟು ಹಾನಿಗೊಳಗಾದವು.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ಕೈಗೊಂಡರು. ಸಿಬ್ಬಂದಿಯ ಸಮಯೋಚಿತ ಕಾರ್ಯಾಚರಣೆಯಿಂದ ಬೆಂಕಿ ಪಕ್ಕದ ಅಂಗಡಿಗಳಿಗೆ ವ್ಯಾಪಿಸುವುದನ್ನು ತಡೆಯಲಾಯಿತು ಎಂದು ತಿಳಿದುಬಂದಿದೆ.

ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಆದರೆ ಅಂಗಡಿಯಲ್ಲಿದ್ದ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿದ್ದು, ಲಕ್ಷಾಂತರ ರೂಪಾಯಿ ನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದೆ.
ಬೆಂಕಿ ಅವಘಡಕ್ಕೆ ನಿಖರ ಕಾರಣ ಹಾಗೂ ಹಾನಿಯ ಪ್ರಮಾಣದ ಕುರಿತು ಸಂಬಂಧಿತ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

















