ಮಣಿಪಾಲ: ಮಣಿಪಾಲ ಟೈಗರ್ ಸರ್ಕಲ್ ಬಳಿಯ ಡ್ರಗ್ ಹೌಸ್ ಮೆಡಿಕಲ್ ಶಾಪ್ ಮುಂಭಾಗದಲ್ಲಿರುವ ಬೃಹತ್ತಾದ ಮಾವಿನ ಮರಕ್ಕೆ ಇಂದು ಮಧ್ಯಾಹ್ನದ ಸುಮಾರಿಗೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗಲಿದ್ದು, ಅಗ್ನಿ ಶಾಮಕ ಇಲಾಖೆಯ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದ್ದಾರೆ.
ಘಟನೆ ನಡೆದ ಕೂಡಲೇ ಅಗ್ನಿ ಶಾಮಕದಳವರು ಧಾವಿಸಿ ಬೆಂಕಿ ನಂದಿಸಿದ ಪರಿಣಾಮ ಯಾವುದೇ ಅನಾಹುತ ಆಗಿಲ್ಲ. ವಿದ್ಯುತ್ ತಂತಿಗಳು ಮರಕ್ಕೆ ತಾಗಿಕೊಂಡಿದ್ದು, ಶಾರ್ಟ್ ಸರ್ಕ್ಯೂಟ್ ನಿಂದ ಮರಕ್ಕೆ ಬೆಂಕಿ ಹತ್ತಿಕೊಂಡಿದೆ ಎನ್ನಲಾಗಿದೆ.
ಮರದ ಸಮೀಪದಲ್ಲೇ ಮೆಡಿಕಲ್ ಶಾಪ್, ಸೆಲೂನ್ ಹಾಗೂ ಕಮರ್ಷಿಯಲ್ ಕಾಂಪ್ಲೆಕ್ಸ್ ಗಳಿವೆ. ಆದರೆ ಘಟನೆಯಿಂದ ಯಾವುದೇ ಹೆಚ್ಚಿನ ಅನಾಹುತ ಸಂಭವಿಸಿಲ್ಲ. ತಕ್ಷಣವೇ ಬೆಂಕಿ ನಂದಿಸಿದ ಪರಿಣಾಮ ಮರಕ್ಕೂ ಹೆಚ್ಚಿನ ಹಾನಿಯಾಗಿಲ್ಲ ಎಂದು ತಿಳಿದುಬಂದಿದೆ.