ಮುಂಬೈ: ಮಹಾರಾಷ್ಟ್ರದ ಛತ್ರಪತಿ ಸಂಭಾಜಿ ನಗರದಲ್ಲಿರುವ ಕೈಗವಸು ತಯಾರಿಕಾ ಕಂಪನಿಯೊಂದರಲ್ಲಿ ಭಾನುವಾರ ನಸುಕಿನ ಜಾವ ಸಂಭವಿಸಿದ ಅಗ್ನಿ ಅವಘಡದಲ್ಲಿ ಕನಿಷ್ಠ ಆರು ಕಾರ್ಮಿಕರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಇನ್ನೂ ಹಲವರು ಗಾಯಗೊಂಡಿದ್ದಾರೆ. ಸದ್ಯ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಅಧಿಕಾರಿಗಳ ಪ್ರಕಾರ, ಅಗ್ನಿಶಾಮಕ ದಳದವರು ತಕ್ಷಣ ಸ್ಥಳಕ್ಕೆ ಧಾವಿಸಿ ಕಟ್ಟಡದೊಳಗೆ ಸಿಲುಕಿರುವ ವ್ಯಕ್ತಿಗಳನ್ನು ಹೊರತೆಗೆಯಲು ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದು ಬೆಳಗಿನ ವೇಳೆಗೆ ಬೆಂಕಿ ಹತೋಟಿಗೆ ಬಂದಿದೆ.
ರಾತ್ರಿ ವೇಳೆ ಕಾರ್ಖಾನೆ ಮುಚ್ಚಿದ್ದು, ಬೆಂಕಿ ಹೊತ್ತಿಕೊಂಡಾಗ ತಾವು ಮಲಗಿದ್ದಾಗಿ ಕಾರ್ಮಿಕರು ತಿಳಿಸಿದ್ದಾರೆ. ಈ ವೇಳೆ ಸುಮಾರು 10-15 ಮಂದಿ ಕಟ್ಟಡದೊಳಗೆ ಸಿಲುಕಿಕೊಂಡಿದ್ದರು ಎಂದು ಸ್ಥಳೀಯರು ತಿಳಿಸಿದ್ದಾರೆ.