ಮಂಗಳೂರು: ಇಲ್ಲಿನ ಬೈಕಂಪಾಡಿ ಕೈಗಾರಿಕಾ ವಲಯದ ಲೆಮಿನಾ ಬಿಡಿ ಉಪಕರಣಗಳ ತಯಾರಿಕಾ ಘಟಕದಲ್ಲಿ ಭಾರಿ ಅಗ್ನಿ ಅನಾಹುತ ಸಂಭವಿಸಿದ್ದು, ಇದರಿಂದ ಕೋಟ್ಯಾಂತರ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿದೆ.
ಕಾರ್ಖಾನೆಯಲ್ಲಿದ್ದ ಆಯಿಲ್ ಟ್ಯಾಂಕ್‌ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಇದು ಇಡೀ ಕಾರ್ಖಾನೆಯನ್ನು ವ್ಯಾಪಿಸಿದೆ. ಇದರ ಪರಿಣಾಮ ಅಪಾರ ಪ್ರಮಾಣ ಉಪಕರಣಗಳಿಗೆ ಹಾನಿ ಉಂಟಾಗಿದೆ. ಯಾವುದೇ ಪ್ರಾಣಾಹಾನಿ ಸಂಭವಿಸಿಲ್ಲ. ಸ್ಥಳಕ್ಕೆ ಅಗ್ನಿಶಾಮಕ ದಳ, ಎಂಸಿಎಫ್ ಹಾಗೂ ಎಂಆರ್‌ಪಿಎಲ್‌ನ ಸಿಬ್ಬಂದಿ ತೆರಳಿ ಎರಡು ತಾಸಿನ ನಿರಂತರ ಕಾರ್ಯಾಚರಣೆ ಬಳಿಕ ಬೆಂಕಿಯನ್ನು ಹತೋಟಿಗೆ ತರುವಲ್ಲಿ ಯಶಸ್ವಿಯಾಗಿದ್ದಾರೆ.