ರಾಜ್ಯದಲ್ಲಿ ದೀಪಾವಳಿ ಹಬ್ಬದ ವೇಳೆ ಪಟಾಕಿ ನಿಷೇಧ: ಸಿಎಂ ಯಡಿಯೂರಪ್ಪ

ಬೆಂಗಳೂರು: ದೀಪಾವಳಿ ಹಬ್ಬದ ಸಂಭ್ರಮದಲ್ಲಿದ್ದ ಜನರಿಗೆ ರಾಜ್ಯ ಸರ್ಕಾರ ಆಘಾತ ನೀಡಿದ್ದು, ರಾಜ್ಯದಲ್ಲಿ ಸಂಪೂರ್ಣವಾಗಿ ನಿಷೇಧಿಸಲು ತೀರ್ಮಾನಿಸಿದೆ.

ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಸಿಎಂ ಬಿ.ಎಸ್ ಯಡಿಯೂರಪ್ಪ, ರಾಜ್ಯದಲ್ಲಿ ದೀಪಾವಳಿ ಹಬ್ಬದ ವೇಳೆ ಪಟಾಕಿಯನ್ನು ಸಂಪೂರ್ಣವಾಗಿ ನಿಷೇಧಿಸುತ್ತೇವೆ ಎಂದು ತಿಳಿಸಿದ್ದಾರೆ.

ಈ ಬಗ್ಗೆ ಇಂದು ಸಂಜೆ ವೇಳೆಗೆ ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ ಹೊರಬೀಳುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.