ಉಡುಪಿ : ಕೋವ್ಯಾಕ್ಸಿನ್ ಪ್ರಥಮಡೋಸ್ ಜಿಲ್ಲೆಯಲ್ಲಿ ಲಭ್ಯವಿರುವುದಿಲ್ಲ. ಮೇ 21 ರಂದು ಗ್ರಾಮೀಣ ಪ್ರದೇಶದಲ್ಲಿ 45 ವರ್ಷ ಮೇಲ್ಪಟ್ಟವರು ಪ್ರಥಮ ಡೋಸ್ ಕೋವಿಶೀಲ್ಡ್ ಲಸಿಕೆ ಹಾಗೂ ಕೋವಿಶೀಲ್ಡ್ ಮೊದಲ ಡೋಸ್ ಲಸಿಕೆ ಪಡೆದು 84 ದಿನಗಳು ಪೂರ್ಣಗೊಂಡು , 2ನೇ ಡೋಸ್ ಲಸಿಕೆ ಪಡೆಯಲು ಬಾಕಿ ಇರುವವರು ಹತ್ತಿರದ ಸರಕಾರಿ ಆಸ್ಪತ್ರೆ/ಆಶಾ ಕಾರ್ಯಕರ್ತೆಯರನ್ನು ಸಂಪರ್ಕಿಸಿ ಲಸಿಕೆ ಲಭ್ಯತೆಯನ್ನು ಖಚಿತಪಡಿಸಿಕೊಂಡು ಲಸಿಕಾ ಕೇಂದ್ರಕ್ಕೆ ಬಂದು ಲಸಿಕೆ ಪಡೆಯುವುದು.
ಗ್ರಾಮೀಣ ಪ್ರದೇಶದ ಸರ್ಕಾರಿ ಆಸ್ಪತ್ರೆಗಳಲ್ಲಿ ಮಾಚ್ 30 ಅಥವಾ ಅದಕ್ಕಿಂತ ಮೊದಲು 1ನೇ ಡೋಸ್ ಕೋವ್ಯಾಕ್ಸಿನ್ ಲಸಿಕೆ ಪಡೆದು 2ನೇ ಡೋಸ್ ಲಸಿಕೆ ಪಡೆಯಲು ಬಾಕಿ ಇರುವವರು ಹತ್ತಿರದ ಸರಕಾರಿ ಆಸ್ಪತ್ರೆ/ಆಶಾ ಕಾರ್ಯಕರ್ತೆಯರನ್ನು ಸಂಪರ್ಕಿಸಿ ಲಸಿಕೆ ಲಭ್ಯತೆಯನ್ನು ಖಚಿತಪಡಿಸಿಕೊಂಡು ಮೇ 21ರಂದು ಲಸಿಕಾ ಕೇಂದ್ರಕ್ಕೆ ಬಂದು ಲಸಿಕೆ ಪಡೆಯುವುದು.
ಮೇ 21 ರಂದು ನಗರ ಪ್ರದೇಶದ ಸರ್ಕಾರಿ ಆಸ್ಪತ್ರೆಗಳಲ್ಲಿ 45 ವರ್ಷ ಮೇಲ್ಪಟ್ಟವರು ಪ್ರಥಮಡೋಸ್ ಕೋವಿಶೀಲ್ಡ್ ಲಸಿಕೆ ಹಾಗೂ ಕೋವಿಶೀಲ್ಡ್ ಮೊದಲ ಡೋಸ್ ಲಸಿಕೆ ಪಡೆದು 84 ದಿನಗಳು ಪೂರ್ಣಗೊಂಡು , 2ನೇ ಡೋಸ್ ಲಸಿಕೆ ಪಡೆಯಲು ಬಾಕಿ ಇರುವವರಿಗೆ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಉಡುಪಿಯಲ್ಲಿ (100 ಡೋಸ್), ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಮಣಿಪಾಲದಲ್ಲಿ (100 ಡೋಸ್), ಜಿಲ್ಲಾ ಆಸ್ಪತ್ರೆ ಅಜ್ಜರಕಾಡುಉಡುಪಿಯಲ್ಲಿ( ಸೇಂಟ್ ಸಿಸಿಲಿ ಶಾಲೆ 250 ಡೋಸ್) ಹಾಗೂ ಸರಕಾರಿ ತಾಯಿ ಮತ್ತು ಮಕ್ಕಳ (ಬಿ.ಆರ್.ಎಸ್) ಆಸ್ಪತ್ರೆ, ಉಡುಪಿಯಲ್ಲಿ (100 ಡೋಸ್) ನೀಡಲಾಗುವುದು. ಅರ್ಹ ಫಲಾನುಭವಿಗಳು ಆಸ್ಪತ್ರೆಯನ್ನು ಸಂಪರ್ಕಿಸಿ ಲಸಿಕೆ ಲಭ್ಯತೆಯನ್ನು ಖಚಿತಪಡಿಸಿಕೊಂಡು ಲಸಿಕಾ ಕೇಂದ್ರಕ್ಕೆ ಬಂದು ಲಸಿಕೆ ಪಡೆಯುಬಹುದಾಗಿದೆ ಎಂದುಜಿಲ್ಲಾಆರೊಗ್ಯ ಮತ್ತು ಕು.ಕ ಇಲಾಖೆಯ ಪ್ರಕಟಣೆ ತಿಳಿಸಿದೆ.