ಮೀನುಗಾರಿಕೆ ಇಲಾಖೆಯ ವಿವಿಧ ಯೋಜನೆ-ಅರ್ಜಿ ಆಹ್ವಾನ

ಉಡುಪಿ: ಜಿಲ್ಲೆಯ ಮೀನುಗಾರಿಕೆ ಇಲಾಖೆಯಿಂದ 2019-20 ನೇ ಸಾಲಿನಲ್ಲಿ ಅನುಷ್ಟಾನಗೊಳಿಸಬೇಕಾದ ವಿವಿಧ ಯೋಜನೆಗಳಿಗೆ ಮೀನುಗಾರರು, ಮೀನು ಕೃಷಿಕರಿಂದ ಅರ್ಜಿ ಆಹ್ವಾನಿಸಲಾಗಿದೆ.

ಮೀನುಮರಿ ವಿತರಣೆ, ಒಳನಾಡು ಹಾಗೂ ಹಿನ್ನೀರು ಜಲಸಂಪನ್ಮೂಲಗಳಲ್ಲಿ ಸಿಗಡಿ ಮತ್ತು ಹಿನ್ನೀರು ಮೀನುಕೃಷಿಗೆ ಪ್ರೋತ್ಸಾಹ ಯೋಜನೆ, ಒಳನಾಡು ಹಾಗೂ ಕರಾವಳಿ ಮೀನುಗಾರರಿಗೆ ಮೀನುಗಾರಿಕೆ ಬಲೆ, ಸಲಕರಣೆ ಕಿಟ್ ಯೋಜನೆಗಳಿಗೆ ಸಂಬಂಧಿಸಿದಂತೆ ಆಗಸ್ಟ್ 31 ರೊಳಗೆ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ತಾಲೂಕು ಮಟ್ಟದ ಕಚೇರಿಯನ್ನು ಸಂಪರ್ಕಿಸುವಂತೆ ಮೀನುಗಾರಿಕಾ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.