ಮೀನುಗಾರಿಕೆ ಸಚಿವ ಕೋಟರಿಂದ ನವದೆಹಲಿ ಭೇಟಿ: ಮೀನುಗಾರಿಕೆ, ಬಂದರು ಯೋಜನೆಗಳ ಕುರಿತು ಕೇಂದ್ರ ಕೃಷಿ ಸಚಿವರ ಜತೆ ಚರ್ಚೆ

ನವದೆಹಲಿ: ರಾಜ್ಯ ಮೀನುಗಾರಿಕೆ ಮತ್ತು ಬಂದರು ಸಚಿವ ಕೋಟ ಶ್ರೀನಿವಾಸ ಪೂಜಾರಿ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರನ್ನು ಇಂದು ದೆಹಲಿಯಲ್ಲಿ ಭೇಟಿಯಾಗಿ ಕರ್ನಾಟಕ ರಾಜ್ಯದ ವಿವಿಧ ಮೀನುಗಾರಿಕೆ ಹಾಗೂ ಬಂದರು ಯೋಜನೆಗಳ ಕುರಿತಂತೆ ಚರ್ಚೆ ನಡೆಸಿದರು.
ಉಡುಪಿ ಜಿಲ್ಲೆಯ ಗಂಗೊಳ್ಳಿಯಲ್ಲಿ, ಕಾರವಾರದ ಮಾವಾಳಿ ಹಾಗೂ ಮಂಗಳೂರಿನ ಬೈಕಂಪಾಡಿಯಲ್ಲಿ ಸಂಯೋಜಿತ ಸೀ ಫುಡ್ ಪಾರ್ಕ್ ಯೋಜನೆಗಳು. ರಾಜ್ಯ ಕರಾವಳಿಯ 8 ಮೀನುಗಾರಿಕಾ ಹಾರ್ಬರ್ ಗಳ ಆಧುನೀಕರಣ ಹಾಗೂ 16 ಕಡೆಗಳಲ್ಲಿ ಮೀನುಗಾರಿಕಾ ಇಳಿದುದಾಣಗಳ ಉನ್ನತೀಕರಣ ಸೇರಿದಂತೆ, ವಿವಿಧ ಯೋಜನೆಗಳಿಗೆ ಅನುಮೋದನೆ ನೀಡಿ, ಅನುದಾನ ಮಂಜೂರು ಮಾಡುವಂತೆ ಸಚಿವ ಕೋಟ ಮನವಿ ಮಾಡಿದರು.
ಯೋಜನಾ ವರದಿಗಳನ್ನು  ಪರಿಶೀಲಿಸಿದ ಕೇಂದ್ರ ಸಚಿವರು, ಧನಾತ್ಮಕವಾಗಿ ಸ್ಪಂದಿಸಿದರು. ಯೋಜನೆಗಳನ್ನು ಶೀಘ್ರವಾಗಿ ಅನುಷ್ಟಾನ ಮಾಡುವಂತೆ ಹಾಗೂ ಪ್ರಧಾನ ಮಂತ್ರಿಯವರ ಆತ್ಮ ನಿರ್ಭರ ಭಾರತ ಯೋಜನೆಯನ್ನು ಕಾರ್ಯಗತಗೊಳಿಸುವ ನಿಟ್ಟಿನಲ್ಲಿ ಆರ್ ಕೆವಿವೈ ಮುಖಾಂತರ  ಯೋಜನೆಗಳಿಗೆ ಅನುಮೋದನೆ ನೀಡಿ, ಅನುದಾನ ಮಂಜೂರು ಮಾಡುವ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಕರ್ನಾಟಕ ಮೀನುಗಾರಿಕೆ ಇಲಾಖೆಯ ನಿರ್ದೇಶಕ ರಾಮಾಚಾರಿ ಇದ್ದರು.