ಮಲ್ಪೆ: ಬೋಟಿನಿಂದ ಕಾಲು ಜಾರಿ ನೀರಿಗೆ ಬಿದ್ದು ಮೀನುಗಾರರೊಬ್ಬರು ಮೃತಪಟ್ಟ ಘಟನೆ ಇಂದು ಬೆಳಗ್ಗೆ 7 ಗಂಟೆ ಸುಮಾರಿಗೆ ಬಂದರಿನಲ್ಲಿ ನಡೆದಿದೆ.
ಮೃತರನ್ನು ಕಟಪಾಡಿ ಮಟ್ಟು ನಿವಾಸಿ ಸಂತೋಷ್ ತಿಂಗಳಾಯ (35) ಎಂದು ಗುರುತಿಸಲಾಗಿದೆ.
ಇವರು ಮಲ್ಪೆಯ ಬಲರಾಮ್ ಪರ್ಸಿನ್ ಬೋಟು ಬಂದರಿನ ಒಳಗೆ ಬರುವಾಗ, ಕಾಲು ಜಾರಿ ನೀರಿಗೆ ಬಿದ್ದರೆನ್ನಲಾಗಿದೆ. ಇವರನ್ನು ಕೂಡಲೇ ಮೇಲಕ್ಕೆ ಎತ್ತಿ ಜಿಲ್ಲಾಸ್ಪತ್ರೆಗೆ ಸಾಗಿಸಿದ್ದು, ಅಲ್ಲಿ ವೈದ್ಯರು ಪರೀಕ್ಷಿಸಿ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.
ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.