ಮೀನುಗಾರರ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ

ಉಡುಪಿ: ಮೀನುಗಾರರ ಸಾಮಾಜಿಕ ಭದ್ರತೆ, ಕಲ್ಯಾಣ ಮಂಡಳಿ ರಚನೆ ಹಾಗೂ ಇನ್ನಿತರ ಹಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಉಡುಪಿ ಜಿಲ್ಲಾ ಮೀನುಗಾರರ ಮತ್ತು ಮೀನು ಕಾರ್ಮಿಕರ ಸಂಘದ ವತಿಯಿಂದ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಎದುರಿನಲ್ಲಿ ಇಂದು ಪ್ರತಿಭಟನೆ ನಡೆಸಲಾಯಿತು.

ಬಳಿಕ ಪ್ರತಿಭಟನಾಕಾರರು ಅಪಾರ ಜಿಲ್ಲಾಧಿಕಾರಿ ಮೂಲಕ ರಾಜ್ಯದ ಮುಖ್ಯ ಮಂತ್ರಿಯವರಿಗೆ ಮನವಿ ಸಲ್ಲಿಸಿದರು.

ಮೀನುಗಾರ ಮುಖಂಡರಾದ ಕೆ. ಶಂಕರ್, ಮಹಾಬಲ ಹೋಡೆಯರ ಹೋಬಳಿ, ಕವಿರಾಜ್ ಎಸ್. ಕಾಂಚನ್, ಜ್ಯೋತಿ ಮೊಗವೀರ, ಗಣೇಶ ಮೊಗವೀರ, ಉದಯಗಾಣಿಗ ಮೋಗೆರ, ಸಿಐಟಿಯು ಜಿಲ್ಲಾ ಉಪಾಧ್ಯಕ್ಷ ಬಾಲಕೃಷ್ಣ ಶೆಟ್ಟಿ, ಜಿಲ್ಲಾ ಕಾರ್ಯದರ್ಶಿ ಸುರೇಶ್ ಕಲ್ಲಾಗಾರ, ಮುಖಂಡರಾದ ವೆಂಕಟೇಶ್ ಕೋಣಿ, ಗಣೇಶ ತೋಂಡೆಮಕ್ಕಿ, ಉಮೇಶ್, ರಾಮ ಕಾರ್ಕಡ, ನಳಿನಿ, ಸುಂದರಿ, ಜಗನ್ನಾಥ ಮೊದಲಾದವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.