ಮಂಗಳೂರು: ಮೀನುಗಾರಿಕಾ ಬೋಟ್‌ನ ತಳಭಾಗ ಕಲ್ಲಿಗೆ ಬಡಿದು ಬೋಟ್ ಮುಳುಗಡೆಯಾದ ಘಟನೆ ಮಂಗಳೂರಿನ ಅಳಿವೆಬಾಗಿಲಿನಲ್ಲಿ ನಡೆದಿದೆ.
‘ಆಯಾನ್’ ಹೆಸರಿನ ಪರ್ಸಿನ್ ಬೋಟ್ ಆಳ ಸಮುದ್ರ ಮೀನುಗಾರಿಕೆಗೆ ತೆರಳಿತ್ತು. ಮೀನುಗಾರಿಕೆ ಮುಗಿಸಿ ವಾಪಸ್ ಬರುತ್ತಿದ್ದ ವೇಳೆ ಅಳಿವೆಬಾಗಿಲಿನಲ್ಲಿ ಬೋಟ್‌ನ ತಳಭಾಗ ಕಲ್ಲಿಗೆ ಬಡಿದಿದೆ. ಪರಿಣಾಮ ಬೋಟ್‌ಗೆ ನೀರು ನುಗ್ಗಿ ಮುಳುಗಡೆಯಾಗಿದೆ.
ಬೋಟ್‌ನಲ್ಲಿದ್ದ ಆರು ಮಂದಿ ಮೀನುಗಾರರನ್ನು ಸಮೀಪದಲ್ಲಿದ್ದ ಇತರೆ ಮೀನುಗಾರಿಕಾ ಬೋಟ್‌ಗಳಲ್ಲಿದ್ದ ಮೀನುಗಾರರು ಸುರಕ್ಷಿತವಾಗಿ ರಕ್ಷಿಸಿದ್ದಾರೆ.
ಬೋಟ್ ಮಾಲೀಕತ್ವ ಇಬ್ರಾಹಿಂ ಖಲೀಲ್ ಅವರಿಗೆ ಸೇರಿದ್ದು, ಬೋಟ್ ಮುಳುಗಡೆಯಿಂದಾಗಿ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ ಎಂದು ತಿಳಿದುಬಂದಿದೆ.















