ಶಿರಾ: ರಾಜ್ಯದಲ್ಲಿ ಮತ್ತೆ ಆಪರೇಷನ್ ಕಮಲಕ್ಕೆ ಬಿಜೆಪಿ ಕೈ ಹಾಕುತ್ತಾ ಎಂಬ ಸುದ್ದಿಯೊಂದು ಹರಿದಾಡುತ್ತಿದೆ. ಇದಕ್ಕೆ ಡಿಸಿಎಂ ಲಕ್ಷ್ಮಣ ಸವದಿ ನೀಡಿರುವ ಹೇಳಿಕೆ ಮತ್ತಷ್ಟು ಪುಷ್ಟಿ ನೀಡಿದೆ.
ಕಾಂಗ್ರೆಸ್ ಪಕ್ಷದಲ್ಲಿ ಭವಿಷ್ಯ ಇಲ್ಲ ಎಂಬ ಕಾರಣಕ್ಕಾಗಿ ಐದು ಕಾಂಗ್ರೆಸ್ ಶಾಸಕರು ಬಿಜೆಪಿಗೆ ಸೇರಲು ಸಿದ್ಧರಾಗಿದ್ದಾರೆ ಎಂದು ಹೇಳಿದ್ದಾರೆ.
ತಾಲ್ಲೂಕಿನ ತಾವರೆಕೆರೆ ಗ್ರಾಮದಲ್ಲಿ ಶಿರಾ ಬಿಜೆಪಿ ಅಭ್ಯರ್ಥಿ ಡಾ.ಸಿ.ಎಂ.ರಾಜೇಶ್ ಗೌಡ ಪರ ಪ್ರಚಾರ ಸಭೆಯಲ್ಲಿ ಅವರು ಈ ಹೇಳಿಕೆ ನೀಡಿದ್ದು, ರಾಜ್ಯ ರಾಜಕೀಯದಲ್ಲಿ ಚರ್ಚೆಯನ್ನು ಹುಟ್ಟುಹಾಕಿದೆ.
ಶಿರಾ ಮತ್ತು ಆರ್.ಆರ್.ನಗರ ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಗೆಲ್ಲಲಿದೆ. ಅಲ್ಲದೆ, ಉಪಚುನಾವಣೆ ಬಳಿಕ ಕಾಂಗ್ರೆಸ್ನ 5 ಶಾಸಕರು ಬಿಜೆಪಿಗೆ ಬರುವುದರಿಂದ ಕಾಂಗ್ರೆಸ್ ಯಾವ ಮಟ್ಟಕ್ಕೆ ತಲುಪುತ್ತದೆ ಎನ್ನುವುದು ಊಹಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.












