ಪಶ್ಚಿಮ ಬಂಗಾಳದಲ್ಲಿ ಹಠಾತ್ ಚಂಡಮಾರುತಕ್ಕೆ 5 ಬಲಿ; 300 ಕ್ಕೂ ಹೆಚ್ಚು ಜನ ಗಾಯಾಳು

ಪಶ್ಚಿಮ ಬಂಗಾಳದಲ್ಲಿ ಹಠಾತ್ ಚಂಡಮಾರುತಕ್ಕೆ 5 ಬಲಿ; 300 ಕ್ಕೂ ಹೆಚ್ಚು ಜನ ಗಾಯಾಳು

ಕೊಲ್ಕತ್ತಾ: ಉತ್ತರ ಪಶ್ಚಿಮ ಬಂಗಾಳದ ಜಲ್ಪೈಗುರಿ ಜಿಲ್ಲೆಗೆ ಭಾನುವಾರ ಅಪ್ಪಳಿಸಿದ ಹಠಾತ್ ಚಂಡಮಾರುತದಲ್ಲಿ ಕನಿಷ್ಠ 5 ಸಾವನ್ನಪ್ಪಿದ್ದಾರೆ ಮತ್ತು 300 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಮನೆಗಳು ಹಾಗೂ ಕಟ್ಟಡಗಳಿಗೂ ಹಾನಿಯಾಗಿರುವ ವರದಿಯಾಗಿದೆ.

ಆಸ್ಪತ್ರೆಗೆ ದಾಖಲಾಗಿರುವ 42 ಮಂದಿಯಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದು ಬಂದಿದೆ.

ಬಂಗಾಳದ ಗವರ್ನರ್ ಸಿವಿ ಆನಂದ ಬೋಸ್ ಅವರು ಸೋಮವಾರ ಚಂಡಮಾರುತ ಪೀಡಿತ ಪ್ರದೇಶಕ್ಕೆ ಭೇಟಿ ನೀಡಿದ್ದು, “ಪರಿಸ್ಥಿತಿಯನ್ನು ನಿರ್ಣಯಿಸಲು ಮತ್ತು ಸಂತ್ರಸ್ತ ಜನರನ್ನು ಭೇಟಿ ಮಾಡಲು ಸ್ವತಃ ಬಂದಿದ್ದೇನೆ” ಎಂದು ಹೇಳಿದ್ದಾರೆ. “ನಾನು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಮತ್ತು ಪರಿಹಾರ ಕ್ರಮಗಳಲ್ಲಿ ತೊಡಗಿಸಿಕೊಂಡಿರುವ ಇತರ ಏಜೆನ್ಸಿಗಳನ್ನು ಸಂಪರ್ಕಿಸಿದೆ. ಈ ವಿಚಾರವಾಗಿ ನಾನು ದೆಹಲಿಯೊಂದಿಗೆ ಸಂಪರ್ಕದಲ್ಲಿದ್ದೇನೆ ಎಂದು ಅವರು ಹೇಳಿದ್ದಾರೆ.

ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸ್ಥಳಕ್ಕೆ ತೆರಳಿದ್ದಾರೆ.

ಚಂಡಮಾರುತ ಪೀಡಿತ ಪ್ರದೇಶಗಳಿಗೆ ಎಲ್ಲ ರೀತಿಯ ಸಹಾಯ ನೀಡಲಾಗುವುದು ಎಂದು ಗೃಹ ಸಚಿವ ಅಮಿತ್ ಶಾ ತಿಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಪರಿಸ್ಥಿತಿಯನ್ನು ಅವಲೋಕಿಸಿದ್ದಾರೆ ಮತ್ತು ಸಂತ್ರಸ್ತರ ಬಗ್ಗೆ ವಿಚಾರಿಸಲು ಉನ್ನತ ಅಧಿಕಾರಿಗಳೊಂದಿಗೆ ಮಾತನಾಡಿದ್ದಾರೆ.