ನವದೆಹಲಿ: ರಾಮಮಂದಿರ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮದ ಪೂರ್ವಭಾವಿಯಾಗಿ, ಅಯೋಧ್ಯೆಯಿಂದ ಬೆಂಗಳೂರಿಗೆ ಮತ್ತು ಅಯೋಧ್ಯೆಯಿಂದ ಕೋಲ್ಕತ್ತಾಕ್ಕೆ ಸಂಪರ್ಕಿಸುವ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನಗಳಿಗೆ ಕೇಂದ್ರ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಚಾಲನೆ ನೀಡಿದರು.
ಲಕ್ನೋದಲ್ಲಿ ಉಪಸ್ಥಿತದ್ದ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಕೋಲ್ಕತ್ತಾದಿಂದ ಅಯೋಧ್ಯೆ ಮಾರ್ಗದ ಉದ್ಘಾಟನಾ ವಿಮಾನದ ಬೋರ್ಡಿಂಗ್ ಪಾಸ್ ಸ್ವೀಕರಿಸಿದರು. ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿದ ಅವರು, ಹೊಸ ದೇಶೀಯ ವಿಮಾನ ನಿಲ್ದಾಣಗಳ ಜೊತೆಗೆ ನಾಲ್ಕು ಅಂತರಾಷ್ಟ್ರೀಯ ವಿಮಾನ ನಿಲ್ದಾಣಗಳ ಸ್ಥಾಪನೆ ಸೇರಿದಂತೆ ರಾಜ್ಯದ ವಾಯುಯಾನ ಪ್ರಗತಿಯನ್ನು ಎತ್ತಿ ತೋರಿಸಿದರು.
ಬೆಂಗಳೂರು ಮತ್ತು ಕೋಲ್ಕತ್ತಾದಿಂದ ವಿಮಾನಗಳು ವಾರಕ್ಕೆ ಮೂರು ಬಾರಿ ಕಾರ್ಯನಿರ್ವಹಿಸಲಿವೆ ಮತ್ತು ಭವಿಷ್ಯದಲ್ಲಿ ಇದು ಹೆಚ್ಚಾಗಲಿದೆ ಎಂದು ಏರ್ ಇಂಡಿಯಾ ಎಕ್ಸ್ಪ್ರೆಸ್ ಮುಖ್ಯ ವಾಣಿಜ್ಯ ಅಧಿಕಾರಿ ಅಂಕುರ್ ಗರ್ಗ್ ತಿಳಿಸಿದರು.