ಜಾನಪದ ಉತ್ಸವ ಹಾಗೂ ಜಾನಪದ ಪ್ರಶಸ್ತಿ ಪ್ರದಾನ ಸಮಾರಂಭ

ಕುಂದಾಪುರ: ಕರ್ನಾಟಕ ಜಾನಪದ ಪರಿಷತ್ತು ಬೆಂಗಳೂರು, ಉಡುಪಿ ಜಿಲ್ಲೆ, ತಲ್ಲೂರು ಫ್ಯಾಮಿಲಿ ಟ್ರಸ್ಟ್ ಉಡುಪಿ, ಯಕ್ಷಗಾನ ಕಲಾಕೇಂದ್ರ ಹಂಗಾರಕಟ್ಟೆ-ಐರೋಡಿ ಸಂಯುಕ್ತವಾಗಿ ಆಯೋಜಿಸಿರುವ ಜಾನಪದ ಉತ್ಸವ-2022 ತಲ್ಲೂರು ಫ್ಯಾಮಿಲಿ ಟ್ರಸ್ಟ್ ಇವರ ಜಾನಪದ ಪ್ರಶಸ್ತಿ-2022 ಪ್ರಶಸ್ತಿ ಪ್ರದಾನ ಸಮಾರಂಭವು ಡಿ.18 ರಂದು ಗುಂಡ್ಮಿ-ಸಾಲಿಗ್ರಾಮ ಇಲ್ಲಿನ ಸದಾನಂದ ರಂಗ ಮಂಟಪದಲ್ಲಿ ಜರುಗಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ಜಾನಪದ ಪರಿಷತ್ತಿನ ಜಿಲ್ಲಾಧ್ಯಕ್ಷ ಹಾಗೂ ತಲ್ಲೂರು ಫ್ಯಾಮಿಲಿ ಟ್ರಸ್ಟ್ ನ ಸ್ಥಾಪಕ ಡಾ. ತಲ್ಲೂರು ಶಿವರಾಮ ಶೆಟ್ಟಿ ಇವರು ವಹಿಸಿದ್ದರು.

ಕಂಬಳ ಸಮಿತಿ ಕುಂದಾಪುರ ಮತ್ತು ಬೈಂದೂರು ತಾಲೂಕು ಅಧ್ಯಕ್ಷ ವೆಂಕಟ ಪೂಜಾರಿ ಇವರಿಗೆ ಜಾನಪದ ಪ್ರಶಸ್ತಿ-2022 ನೀಡಲಾಯಿತು.

ಸಾಲಿಗ್ರಾಮ ಪಟ್ಟಣ ಪಂಚಾಯತ್ ಅಧ್ಯಕ್ಷೆ ಸುಮಲತಾ ಹೆಗ್ಡೆ, ಯಕ್ಷಗಾನ ಕಲಾಕೇಂದ್ರದ ಅಧ್ಯಕ್ಷ ರಾಜಶೇಖರ ಹೆಬ್ಬಾರ್, ರಂಗಕರ್ಮಿ ಪ್ರದೀಪ್ ಚಂದ್ರ ಕುತ್ಪಾಡಿ, ಪರಿಷತ್ತಿನ ಜಿಲ್ಲಾ ಕಾರ್ಯದರ್ಶಿ ರವಿರಾಜ ನಾಯಕ್, ಜಿಲ್ಲಾ ಖಜಾಂಜಿ ಕೆ. ಜಯರಾಮ ಆಚಾರ್ಯ, ಪರಿಷತ್ತಿನ ಬ್ರಹ್ಮಾವರ ಘಟಕದ ಅಧ್ಯಕ್ಷ ಎಚ್.ಸುದರ್ಶನ್ ಹೆಗ್ಡೆ ಉಪಸ್ಥಿತರಿದ್ದರು.