ಪೆರಂಪಳ್ಳಿ: ಟ್ರಿನಿಟಿ ಸೆಂಟ್ರಲ್ ಶಾಲೆಯು ಐ.ಸಿ.ಎಸ್.ಸಿ ಸ್ಟ್ರೀಮ್ ನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಸತತ 8 ವರ್ಷಗಳಿಂದ ಶೇ. 100 ಫಲಿತಾಂಶವನ್ನು ದಾಖಲಿಸಿಕೊಂಡು ಬಂದಿದೆ.
2021-22 ನೇ ಸಾಲಿನಲ್ಲಿ 50 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 24 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ, 26 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದು, ಕುಮಾರಿ ರಾನಿಯಾ ಡಿ’ಸೋಜಾ 98.5 ಅಂಕಗಳಿಸಿ ಪ್ರಥಮ ಸ್ಥಾನವನ್ನು, ಕುಮಾರಿ ಡ್ಯಾಗ್ನಿ ಕ್ಯಾರಲ್ ನೊರೋನ್ಹಾ ಎರಡನೇ ಸ್ಥಾನವನ್ನು, ಹರ್ಷ ಯು ಪೂಜಾರಿ ಹಾಗೂ ಕನ್ನಿಕ ಮೂರನೇ ಸ್ಥಾನವನ್ನು ಹಂಚಿಕೊಂಡಿರುತ್ತಾರೆ. 11ವಿದ್ಯಾರ್ಥಿಗಳು ವಿವಿಧ ವಿಷಯಗಳಲ್ಲಿ 100 ಕ್ಕೆ 100 ಅಂಕಗಳನ್ನು ಗಳಿಸಿದ್ದಾರೆ.
ಶಾಲೆಗೆ ಕೀರ್ತಿ ತಂದಿರುವ ವಿದ್ಯಾರ್ಥಿಗಳನ್ನು ಶಾಲಾ ಪ್ರಾಂಶುಪಾಲರಾದ ವಂದನೀಯ ಗುರು ಡೊಮೆನಿಕ್ ಸುನಿಲ್ ಲೋಬೋ ಹಾಗೂ ಶಾಲಾ ಶಿಕ್ಷಕ ವೃಂದದವರು ಅಭಿನಂದಿಸಿದ್ದಾರೆ.