ಬೆಂಗಳೂರು: ಕರ್ನಾಟಕ ವಿಧಾನಸಭೆಯಲ್ಲಿ ನಾಸಿರ್ ಹುಸೇನ್ ರಾಜ್ಯಸಭಾ ಗೆಲುವಿನ ಸಂಭ್ರಮಾಚರಣೆ ವೇಳೆ ಪಾಕಿಸ್ತಾನ್ ಜ಼ಿಂದಾಬಾದ್ ಘೋಷಣೆ ಹಾಕಿದ್ದು ನಿಜ ಎಂದು ಫೊರೆನ್ಸಿಕ್ ತಜ್ಞರು ವರದಿಯಲ್ಲಿ ಖಚಿತಪಡಿಸಿದ್ದಾರೆ ಮಾಧ್ಯಮ ವರದಿಯಾಗಿದ್ದು, ಈ ಸಂಬಂಧ ಒಬ್ಬರನ್ನು ವಶಕ್ಕೆ ಪಡೆದು ವಿಚಾರಿಸಲಾಗಿದೆ.
ರಾಜ್ಯ ಸರ್ಕಾರಕ್ಕೆ ಸಲ್ಲಿಸಲಾದ ವರದಿಯು ವಿಡಿಯೋ ಮತ್ತು ಆಡಿಯೋ ಎರಡರಲ್ಲೂ ಪಾಕಿಸ್ತಾನ ಪರ ಘೋಷಣೆಗಳ ಉಪಸ್ಥಿತಿಯನ್ನು ದೃಢಪಡಿಸಿದೆ ಮತ್ತು ದೃಶ್ಯಗಳನ್ನು ಕೃತಕವಾಗಿ ಮಾಡಲಾಗಿಲ್ಲ ಎಂದು ಹೇಳಿದೆ.
ಬಂಧಿತ ಆರೋಪಿಯನ್ನು ಮೊಹಮ್ಮದ್ ಶಫೀಕ್ ನಾಶಿಪುಡಿ ಎಂದು ಗುರುತಿಸಲಾಗಿದೆ ಎಂದು ಹಾವೇರಿ ಪೊಲೀಸ್ ವರಿಷ್ಠಾಧಿಕಾರಿ ಅಂಶುಕುಮಾರ್ ತಿಳಿಸಿದ್ದಾರೆ.
ಫೆಬ್ರವರಿ 27 ರಂದು ಕರ್ನಾಟಕ ವಿಧಾನಸಭೆಯಲ್ಲಿ ಪಾಕಿಸ್ತಾನದ ಪರ ಘೋಷಣೆ ಕೂಗಿದ್ದಕ್ಕೆ ಸಂಬಂಧಿಸಿದಂತೆ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ಆರೋಪಿ ಮೊಹಮ್ಮದ್ ಶಫೀಕ್ ನಾಶಿಪುಡಿ ಎಂಬಾತನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ ಎಂದು ಅವರು ಹೇಳಿದ್ದಾರೆ.