ರಾಂಚಿ: ಬಹುಕೋಟಿ ಮೇವು ಹಗರಣದ ಚಾಯಿಬಾಸಾ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್ಜೆಡಿ ಪಕ್ಷದ ನಾಯಕ, ಬಿಹಾರ ಮಾಜಿ ಸಿಎಂ ಲಾಲು ಪ್ರಸಾದ್ ಯಾದವ್ ಅವರಿಗೆ ಜಾರ್ಖಂಡ್ ಹೈಕೋರ್ಟ್ ಶುಕ್ರವಾರ ಜಾಮೀನು ಮಂಜೂರು ಮಾಡಿದೆ.
ಲಾಲು ಅವರಿಗೆ ಈ ಪ್ರಕರಣದಲ್ಲಿ ಜಾಮೀನು ಸಿಕ್ಕಿದರೂ ಜೈಲುವಾಸ ಮುಂದುವರಿಯಲಿದೆ. ಲಾಲು ಹಲವು ಪ್ರಕರಣಗಳಲ್ಲಿ ದೋಷಿಯಾಗಿದ್ದು, ದುಮ್ಕಾ ಖಜಾನೆ ಪ್ರಕರಣದ ವಿಚಾರಣೆ ಇನ್ನೂ ಬಾಕಿ ಇರುವುದರಿಂದ ಅವರು ಜೈಲಿನಲ್ಲಿಯೇ ಇರಬೇಕಾಗಿದೆ.
1992–93ರಲ್ಲಿ ಚಾಯಿಬಾಸಾ ಖಜಾನೆಯಿಂದ ₹33.67 ಕೋಟಿ ಹಣವನ್ನು ಅಕ್ರಮವಾಗಿ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಲಾಲು ಸೇರಿದಂತೆ ಒಟ್ಟು 16 ಮಂದಿಗೆ ಜೈಲು ಶಿಕ್ಷೆ ವಿಧಿಸಲಾಗಿತ್ತು. ಆ ಅವಧಿಯಲ್ಲಿ ಲಾಲು ಅವರೇ ಬಿಹಾರದ ಮುಖ್ಯಮುಂತ್ರಿ ಆಗಿದ್ದರು.
72 ವರ್ಷ ವಯಸ್ಸಿನ ಲಾಲು ಅವರು ರಾಂಚಿಯಲ್ಲಿರುವ ರಾಜೇಂದ್ರ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ (ರಿಮ್ಸ್) ಆಸ್ಪತ್ರೆಯಲ್ಲಿ ಹಲವು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ