ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ ನಿಧನ

ಲಖನೌ: ಕೆಲಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿಯ ಹಿರಿಯ ನಾಯಕ ಕಲ್ಯಾಣ್ ಸಿಂಗ್ (89) ಶನಿವಾರ ರಾತ್ರಿ ನಿಧನ ಹೊಂದಿದರು.

ಜುಲೈ 4ರಂದು ಸಿಂಗ್ ಅವರನ್ನು ಸಂಜಯ್ ಗಾಂಧಿ ಆಸ್ಪತ್ರೆಯ ತೀವ್ರ ನಿಗಾ ಘಟಕಕ್ಕೆ ದಾಖಲಿಸಲಾಗಿತ್ತು. ಸೆಪ್ಸಿಸ್ ಮತ್ತು ಬಹು ಅಂಗಾಂಗ ವೈಫಲ್ಯದಿಂದ ಅವರು ನಿಧನರಾದರು ಎಂದು ಆಸ್ಪತ್ರೆ ತಿಳಿಸಿದೆ.

ಡಿಸೆಂಬರ್ 6, 1992ರಂದು ಅಯೋಧ್ಯೆಯಲ್ಲಿ ಬಾಬ್ರಿ ಮಸೀದಿಯನ್ನು ಧ್ವಂಸಗೊಳಿಸಿದಾಗ ಕಲ್ಯಾಣ್ ಸಿಂಗ್ ಅವರು ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿದ್ದರು. ನಂತರ ಅವರು ರಾಜಸ್ಥಾನದ ರಾಜ್ಯಪಾಲರಾಗಿಯೂ ಸೇವೆ ಸಲ್ಲಿಸಿದ್ದರು.