ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯವು ಗೌರವ ಡಾಕ್ಟರೇಟ್ ನೀಡಿದ್ದು, ಶುಕ್ರವಾರ ಇರುವಕ್ಕಿಯಲ್ಲಿ ನಡೆದ 8ನೇ ಘಟಿಕೋತ್ಸವದಲ್ಲಿ ರಾಜ್ಯಪಾಲ ತಾವರಚಂದ್ ಗೆಹ್ಲೋಟ್ ಡಾಕ್ಟರೇಟ್ ಪ್ರದಾನ ಮಾಡಿದರು.
“ಘನತೆವೆತ್ತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಜೀ ಮತ್ತು ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯ ಇಂದು ನೀಡಿದ ಗೌರವ ಡಾಕ್ಟರೇಟ್ ಸನ್ಮಾನ, ವಿಶೇಷವಾಗಿ ನಮ್ಮ ಅನ್ನದಾತ ರೈತರ ಹಕ್ಕು ಹಾಗೂ ಹಿತರಕ್ಷಣೆ ನಿಟ್ಟಿನಲ್ಲಿ ನನ್ನ ಪ್ರಾಮಾಣಿಕ ಪ್ರಯತ್ನಗಳಿಗೆ ಸಂದ ಮನ್ನಣೆಯಾಗಿದೆ ಎಂದು ನಾನು ಭಾವಿಸುತ್ತೇನೆ. ನಮ್ಮ ರೈತರು ನೆಮ್ಮದಿಯಿಂದ ಬದುಕುವಂತಾಗುವ ನಿಟ್ಟಿನಲ್ಲಿ ಮತ್ತಷ್ಟು ಪ್ರಯತ್ನಿಸಲು ಈ ಗೌರವ ಪ್ರೇರಣೆ ನೀಡುತ್ತಿದೆ. ಈ ವಿಶಿಷ್ಟ ಗೌರವಕ್ಕಾಗಿ ಮತ್ತೊಮ್ಮೆ ಸನ್ಮಾನ್ಯ ರಾಜ್ಯಪಾಲರಿಗೆ ಮತ್ತು ಕೃಷಿ ವಿಶ್ವವಿದ್ಯಾಲಯಕ್ಕೆ ನನ್ನ ಹೃತ್ಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ” ಎಂದು ಯಡಿಯೂರಪ್ಪ ಹೇಳಿದ್ದಾರೆ
ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಕ್ಷೇತ್ರಕ್ಕೆ ನೀಡಿದ ಕೊಡುಗೆಯನ್ನು ಪರಿಗಣಿಸಿ ವಿಶ್ವವಿದ್ಯಾಲಯವು ಮಾಜಿ ಸಿಎಂ ಅವರನ್ನು ಗೌರವ ಡಾಕ್ಟರೇಟ್‌ಗೆ ಆಯ್ಕೆ ಮಾಡಿದೆ. ಕೃಷಿ ಸಚಿವ ಎನ್.ಚೆಲುವರಾಯಸ್ವಾಮಿ, ಉಪಕುಲಪತಿ ಡಾ.ಆರ್.ಸಿ. ಜಗದೀಶ ಮತ್ತಿತರರು ಉಪಸ್ಥಿತರಿದ್ದರು.