ಮಾಜಿ ಸಚಿವ ಕೆ.ಅಮರನಾಥ ಶೆಟ್ಟಿ ಇನ್ನಿಲ್ಲ

ಮಂಗಳೂರು: ಮಾಜಿ ಸಚಿವ ಕೆ. ಅಮರನಾಥ ಶೆಟ್ಟಿ ಅವರು ಸೋಮವಾರ ನಿಧನ ಹೊಂದಿದರು. ಅನಾರೋಗ್ಯದ ಹಿನ್ನೆಲೆಯಲ್ಲಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು, ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ ನಿಧನರಾದರು.
ಜೆಡಿಎಸ್ ಪಕ್ಷದ ಹಿರಿಯ ನಾಯಕರಾಗಿದ್ದ ಅಮರನಾಥ ಶೆಟ್ಟಿ ಅವರು, ಮೂಡಬಿದ್ರೆ ವಿಧಾನಸಭಾ ಕ್ಷೇತ್ರದಿಂದ ಸತತ ಮೂರು ಬಾರಿ ಜೆಡಿಎಸ್ ನಿಂದ ಸ್ಪರ್ಧಿಸಿ ಶಾಸಕರಾಗಿದ್ದರು.
1983ರಲ್ಲಿ ಮೊದಲ ಬಾರಿಗೆ ಶಾಸಕರಾಗಿದ್ದರು.
ಜನತಾ ಪರಿವಾರದ ಸರ್ಕಾರಗಳಲ್ಲಿ ಸಚಿವರಾಗಿದ್ದ ಅವರು ಕರಾವಳಿ ಅಭಿವೃದ್ಧಿಗೆ ಸಾಕಷ್ಟು ಕೊಡುಗೆ ನೀಡಿದ್ದರು. ಪ್ರವಾಸೋದ್ಯಮ, ಧಾರ್ಮಿಕ ದತ್ತಿ, ಎಪಿಎಂಸಿ ಬಂದರು-ಮೀನುಗಾರಿಕೆ, ಕಾರ್ಮಿಕ ಸಚಿವರಾಗಿದ್ದರು‌. 2016 ರಲ್ಲಿ ರಾಜಕೀಯದಿಂದ ವಿಶ್ರಾಂತರಾಗಿದ್ದರು. ಅವರ ನಿಧನದಿಂದಾಗಿ ಕರಾವಳಿ ರಾಜಕೀಯದ ಹಿರಿಯ ಕೊಂಡಿಯೊಂದು ಕಳಚಿದಂತಾಗಿದೆ.