ಕುಂದಾಪುರ: ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆಯವರ ಪತ್ನಿ ನಾಗರತ್ನ ಹೆಗ್ಡೆ(80) ಭಾನುವಾರ ಸಂಜೆ ಬಸ್ರೂರಿನ ತಮ್ಮ ಸ್ವಗ್ರಹದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಸೋಮವಾರ ಮಧ್ಯಾಹ್ನ ಕೊಲ್ಲೂರು ಸಮೀಪದ ಕೂಡುರು ಮನೆಯಲ್ಲಿ ಮೃತರ ಅಂತ್ಯಕ್ರಿಯೆ ನಡೆಯಲಿದ್ದು, ಬೆಳಗ್ಗೆ 11 ಗಂಟೆವರೆಗೆ ಸಾರ್ವಜನಿಕ ದರ್ಶನಕ್ಕಾಗಿ ಪಾರ್ಥಿವ ಶರೀರವನ್ನು ಇಡಲಾಗುವುದು ಎಂದು ಕುಟುಂಬಿಕರು ತಿಳಿಸಿದ್ದಾರೆ.












