ಕಲಘಟಗಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಸಿ.ಎಂ.ನಿಂಬಣ್ಣವರ್ ವಿಧಿವಶ

ಹುಬ್ಬಳ್ಳಿ: ಇಂದು ಬೆಳಿಗ್ಗೆ ಬೆಂಗಳೂರಿನಲ್ಲಿ ಕಲಘಟಗಿ ಕ್ಷೇತ್ರದ ಮಾಜಿ ಶಾಸಕ ಸಿ.ಎಂ.ನಿಂಬಣ್ಣವರ್ (76) ಹೃದಯಾಘಾತದಿಂದ ನಿಧನರಾದರು. ಪುತ್ರಿಯ ಮನೆಗೆ ಆಗಮಿಸಿದ ಸಂದರ್ಭದಲ್ಲಿ ಅವರಿಗೆ ಹೃದಯಾಘಾತವಾಗಿದೆ ಎನ್ನಲಾಗಿದೆ. ಸಿ.ಎಂ.ನಿಂಬಣ್ಣವರ್​ 2018ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಗೆಲುವು ದಾಖಲಿಸಿದ್ದರು. ಮಾಜಿ ಶಾಸಕರ ಅಗಲಿಕೆಗೆ ರಾಜಕೀಯ ಮುಖಂಡರು, ಕಾರ್ಯಕರ್ತರು ಹಾಗೂ ಅವರ ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ‌.ಮೃತದೇಹವನ್ನು ಸಂಜೆ ಅಥವಾ ನಾಳೆ ಬೆಳಿಗ್ಗೆ ಕಲಘಟಗಿಗೆ ತರುವ ಸಾಧ್ಯತೆ ಇದೆ.