udupixpress
Home Trending ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ವಿಧಿವಶ

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ವಿಧಿವಶ

ನವದೆಹಲಿ: ಕಳೆದ ಒಂದು ತಿಂಗಳಿನಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ (84) ಇಂದು ಚಿಕಿತ್ಸೆ ಫಲಕಾರಿಯಾಗದೆ ನಿಧನರಾದರು.

ಅವರು ಭಾರತದ 13ನೇ ರಾಷ್ಟ್ರಪತಿ, ದೇಶದ ಆರ್ಥಿಕ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ. ಅವರಿಗೆ ಎರಡು ವರ್ಷ ಹಿಂದೆ ಭಾರತ ರತ್ನ ಪ್ರಶಸ್ತಿ ನೀಡಿ ಪುರಸ್ಕಾರಿಸಲಾಗಿತ್ತು. ದೆಹಲಿಯ ಆರ್ಮಿ ರಿಸರ್ಚ್ ಮತ್ತು ರೆಫರ್ರೆಲ್ ಆಸ್ಪತ್ರೆಯಲ್ಲಿ ಮೆದುಳು ಶಸ್ತ್ರಚಿಕಿತ್ಸೆ ಒಳಗಾಗಿದ್ದ ಅವರು, ಇಂದು ಚಿಕಿತ್ಸೆ ಫಲಕಾರಿಯಾಗದೆ ವಿಧಿವಶರಾಗಿದ್ದಾರೆ ಎಂದು ಆಸ್ಪತ್ರೆ ಮೂಲಗಳಿಂದ ತಿಳಿದುಬಂದಿದೆ.

ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿದ್ದ ಪರಿಣಾಮ ಶಸ್ತ್ರಚಿಕಿತ್ಸೆ ಮೂಲಕ ಭಾರೀ ರಕ್ತ ಹೊರತೆಗೆಯಲಾಗಿತ್ತು. ಬಳಿಕ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ಅವರಿಗೆ ವೆಂಟಿಲೇಟರ್ ನಲ್ಲಿ ಚಿಕಿತ್ಸೆ ನೀಡಲಾಗಿತ್ತು.