ಬೆಂಗಳೂರು: ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರ ಪತ್ನಿ ಚೆನ್ನಮ್ಮ ದೇವೇಗೌಡ ಅವರು ಇಂದು ಹೃದಯಘಾತದಿಂದ ಕೊನೆಯುಸಿರೆಳೆದಿದ್ದಾರೆ.
ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಚೆನ್ನಮ್ಮ ಅವರನ್ನ ಕಳೆದ 4 ದಿನಗಳ ಹಿಂದಷ್ಟೇ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ತೀವ್ರ ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಚಿಕಿತ್ಸೆ ಫಲಕಾರಿಯಾಗದೇ ಇಂದು ಸಂಜೆ 4:50 ರ ಸುಮಾರಿಗೆ ವಿಧಿವಶರಾಗಿದ್ದಾರೆ.















