ತೆಲಂಗಾಣ ಮಾಜಿ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಆಸ್ಪತ್ರೆಗೆ ದಾಖಲು: ಆರೋಗ್ಯ ಸ್ಥಿತಿ ಸ್ಥಿರ

ಹೈದರಾಬಾದ್: ತೆಲಂಗಾಣ ಮಾಜಿ ಮುಖ್ಯಮಂತ್ರಿ ಹಾಗೂ ಭಾರತ ರಾಷ್ಟ್ರ ಸಮಿತಿ ಪಕ್ಷದ ಮುಖ್ಯಸ್ಥ ಕೆ ಚಂದ್ರಶೇಖರ್ ರಾವ್ ಅವರು ಕಳೆದ ರಾತ್ರಿ ತಮ್ಮ ತೋಟದ ಮನೆಯಲ್ಲಿ ಕುಸಿದು ಬಿದ್ದು ಗಾಯಗೊಂಡಿದ್ದಾರೆ. ಕೆಸಿಆರ್ ಅವರನ್ನು ತಕ್ಷಣವೇ ಹೈದರಾಬಾದ್‌ನ ಯಶೋಧಾ ಆಸ್ಪತ್ರೆಗೆ ದಾಖಲಿಸಲಾಗಿದೆ

ಗುರುವಾರ ಎರ್ರವಳ್ಳಿ ತೋಟದ ಮನೆಯಲ್ಲಿ ರಾವ್ ಕಾಲು ಜಾರಿ ಕೆಳಗೆ ಬಿದ್ದಿದ್ದರು. ಬಿದ್ದ ನಂತರ ಅವರ ಎಡ ಸೊಂಟದ ಮೂಳೆ ಮುರಿದಿದೆ ಎಂದು ವರದಿಯಾಗಿದೆ. ಸದ್ಯ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಮುಖ್ಯಮಂತ್ರಿಯವರಿಗೆ ವೈದ್ಯರು ಕೆಲವು ಪರೀಕ್ಷೆಗಳನ್ನು ನಡೆಸಲಿದ್ದಾರೆ ಎಂದು ಸ್ಥಳೀಯ ವರದಿಗಳು ಸೂಚಿಸುತ್ತವೆ. ಸದ್ಯ ಕೆಸಿಆರ್ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ವರದಿಯಾಗಿದೆ.