ಫಾರ್ಚೂನ್ ಅಕಾಡೆಮಿ ಆಫ್ ಹೆಲ್ತ್ ಸೈನ್ಸಸ್ : ಪದವಿ ಪ್ರದಾನ ಸಮಾರಂಭ

ಬ್ರಹ್ಮಾವರ: ಫಾರ್ಚ್ಯೂನ್ ಅಕಾಡೆಮಿಕ್ ಆ್ಯಂಡ್ ಚಾರಿಟೇಬಲ್ ಟ್ರಸ್ಟ್ (ರಿ.) ಇದರ ಆಡಳಿತಕೊಳಪಟ್ಟ ಫಾರ್ಚ್ಯೂನ್ ಅಕಾಡೆಮಿ ಆಫ್ ಹೆಲ್ತ್ ಸೈನ್ಸಸ್‌ನ ಬಿ.ಎಸ್ಸಿ. ನರ್ಸಿಂಗ್, ಜನರಲ್ ನರ್ಸಿಂಗ್ ಮತ್ತು ಪ್ಯಾರಾಮೆಡಿಕಲ್ ವಿದ್ಯಾರ್ಥಿಗಳ ಪದವಿ ಪ್ರದಾನ ಸಮಾರಂಭ ಕಾರ್ಯಕ್ರಮ ದಿನಾಂಕ 01.03.2026 ರಂದು ಕಾಲೇಜಿನ ಆಡಿಟೋರಿಯಂನಲ್ಲಿ ಜರುಗಿತು.

ಈ ಸಮಾರಂಭದ ಮುಖ್ಯ ಅತಿಥಿಗಳಾಗಿ ಡಾ| ಮಹಾಬ ಲೇಶ ಶೆಟ್ಟಿ, ಡೀನ್ ಆಳ್ವಾಸ್ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ಮತ್ತು ಸಂಶೋಧನಾ ಕೇಂದ್ರ ಮೂಡಬಿದ್ರಿ ಇವರು ಭಾಗವಹಿಸಿ, ಕಾರ್ಯಕ್ರಮ ಉದ್ಘಾಟಿಸಿ ,ವಿದ್ಯಾರ್ಥಿಗಳಿಗೆ ಶುಭ ಹಾರೈಸಿ ತಮ್ಮ ಹಿತ ನುಡಿಯಲ್ಲಿ ನರ್ಸಿಂಗ್ ವಿದ್ಯಾರ್ಥಿಗಳಲ್ಲಿ ಇರಬೇಕಾದ ಮೌಲ್ಯಗಳ ಕುರಿತು ಮಾತನಾಡಿದರು.

ಫಾರ್ಚ್ಯೂನ್ ಅಕಾಡೆಮಿ ಆಫ್ ಹೆಲ್ತ್ ಸೈನ್ಸಸ್‌ನ ಅಧ್ಯಕ್ಷರಾದ ಡಾ| ದೈವಿಕ್ ಟಿ. ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ, ವಿದ್ಯಾರ್ಥಿಗಳನ್ನು ಪ್ರೇರೇಪಿಸುವ ಮಾತುಗಳನ್ನಾಡಿದರು. ಹಾಗೆಯೇ ಕಾಲೇಜಿನ ಮುಖ್ಯಸ್ಥರಾದ ತಾರನಾಥ್ ಶೆಟ್ಟಿ ಉಪಸ್ಥಿತರಿದ್ದು, ಕಾಲೇಜಿನಲ್ಲಿ ಅತೀ ಹೆಚ್ಚು ಅಂಕಗಳಿಸಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಮೊದಲತಾವ್ ಮೋಹನದಾಸ್ ಶೆಟ್ಟಿ ಸ್ಮರಣಾರ್ಥ ಶೈಕ್ಷಣಿಕ ಪ್ರಶಸ್ತಿಯೊಂದಿಗೆ ನಗದು ಬಹುಮಾನ ನೀಡಿ ಗೌರವಿಸಿದರು.

ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಸ್ಮಿತಾಮೋಲ್ ಇ.ಎಮ್. ಇವರು ವಿದ್ಯಾರ್ಥಿಗಳಿಗೆ ಪದವಿ ಪ್ರಮಾಣವಚನ ಭೋದಿಸಿದರು. ಈ ಕಾರ್ಯಕ್ರಮವನ್ನು ಕಾಲೇಜಿನ ಉಪನ್ಯಾಸಕಿಯರಾದ ಕುಮಾರಿ ಸೆರೆನಾ ಹಾಗೂ ಕುಮಾರಿ ವೆಲ್ಮೀರ ನಿರೂಪಿಸಿ, ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣಾ ಪಟ್ಟಿ ಯನ್ನು ಕುಮಾರಿ ಪ್ರೀತಿಕಾ ವಾಚಿಸಿದರು. ಶ್ರೀ ಪವನ್ ಕುಮಾರ್ ವಂದನಾರ್ಪಣೆಗೈದರು. ಈ ಕಾರ್ಯಕ್ರಮದಲ್ಲಿ ಕಾಲೇಜಿನ ಆಡಳಿತ ಮಂಡಳಿ ಕಾರ್ಯದರ್ಶಿ ಸುಜಿತ್ ಶೆಟ್ಟಿ ಹಾಗೂ ಇತರ ಸದಸ್ಯರು, ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ನಂತರ ವಿದ್ಯಾರ್ಥಿಗಳಿಂದ ವೈವಿದ್ಯಮಯ ಕಾರ್ಯಕ್ರಮ ನಡೆಯಿತು.