ಫೆ.11 ರಂದು ಅತ್ತೂರು ಪರ್ಪಲೆಗಿರಿ ಕಲ್ಕುಡ ಸ-ಪರಿವಾರ ದೈವಗಳ ದೈವಸ್ಥಾನದ ಶಿಲಾನ್ಯಾಸ ಕಾರ್ಯಕ್ರಮ

ಕಾರ್ಕಳ: ಅತ್ತೂರು ಕೃಷ್ಣಗಿರಿ ಕಲ್ಕುಡ ದೈವಸ್ಥಾನ ಟ್ರಸ್ಟ್ (ರಿ) ಕಾರ್ಕಳ ಶ್ರೀ ಕ್ಷೇತ್ರ ಅತ್ತೂರು ಪರ್ಪಲೆಗಿರಿ (Atturu Parpalegiri) ಪುನರುತ್ಥಾನ ಸಮಿತಿಯ ನೇತೃತ್ವದಲ್ಲಿ ಜಗದ್ಗುರು ಅನಂತ ಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತಿ ಮಹಾಸ್ವಾಮೀಜಿಯವರ ಉಪಸ್ಥಿತಿಯಲ್ಲಿ ಕಲ್ಕುಡ ಸ-ಪರಿವಾರ ದೈವಗಳ ದೈವಸ್ಥಾನದ ಶಿಲಾನ್ಯಾಸ ಕಾರ್ಯಕ್ರಮ ಫೆ.11 ರಂದು ಬೆಳಿಗ್ಗೆ 9.30ಕ್ಕೆ ನಡೆಯಲಿದ್ದು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಪ್ರಕಟಣೆ ತಿಳಿಸಿದೆ.