ಉಡುಪಿ: ಉಡುಪಿ ಜಿಲ್ಲೆಯ ವಂಡ್ಸೆ ಹಾಗೂ ಕುಂದಾಪುರ ಬ್ಲಾಕ್ ಕಾಂಗ್ರೆಸ್ ಕಚೇರಿಗಳ ಶಂಕುಸ್ಥಾಪನೆ ಕಾರ್ಯಕ್ರಮವು ಬುಧವಾರ ಜರುಗಿತು. ಕಾರ್ಯಕ್ರಮದಲ್ಲಿ ಮಾನ್ಯ ಸಚಿವರಾದ ಎನ್ ಎಸ್ ಭೋಜರಾಜು, ಕೆಪಿಸಿಸಿ ಕಾರ್ಯಾಧ್ಯಕ್ಷರು ಮತ್ತು ಶಾಸಕರಾದ ಮಂಜುನಾಥ ಭಂಡಾರಿ ಅವರು ಭಾಗವಹಿಸಿ ಶಂಕುಸ್ಥಾಪನೆ ನೆರವೇರಿಸಿದರು.
ಕಾರ್ಯಕ್ರಮದಲ್ಲಿ ಕರಾವಳಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಗಫೂರ್, ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರ್, ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷರಾದ ಕಿಶನ್ ಹೆಗ್ಡೆ, ಉಡುಪಿ ಜಿಲ್ಲಾ ಲೋಕಸಭಾ ಅಭ್ಯರ್ಥಿಯಾದ ಜಯಪ್ರಕಾಶ್ ಹೆಗ್ಡೆ, ಬೈಂದೂರು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾದ ಗೋಪಾಲಪೂಜಾರಿ, ಕುಂದಾಪುರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾದ ದಿನೇಶ್ ಹೆಗ್ಡೆ, ಕಾರ್ಕಳ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾದ ಮುನಿಯಾಲು ಉದಯ್ ಕುಮಾರ್ ಶೆಟ್ಟಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಕುಂದಾಪುರ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಹರಿಪ್ರಸಾದ್ ಶೆಟ್ಟಿ, ವಂಡ್ಸೆ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಪದೀಪ್ ಶೆಟ್ಟಿ ಬೈಂದೂರು ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಅರವಿಂದ್ ಪೂಜಾರಿ, ಕಾಂಗ್ರೆಸ್ ಮುಖಂಡರಾದ ರಾಜು ಪೂಜಾರಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಆರ್ಜಿಪಿಆರ್ಎಸ್ ಅಧ್ಯಕ್ಷರಾದ ಸುಭಾಶ್ಚಂದ್ರ ಶೆಟ್ಟಿ ಸೇರಿದಂತೆ ಅನೇಕ ಮುಖಂಡರು ಹಾಗೂ ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

















