ಅಕ್ಟೋಬರ್ 2 ರಂದು ಗಾಂಧಿ ಭವನ ನಿರ್ಮಾಣ ಕಾಮಗಾರಿ ಶಂಕುಸ್ಥಾಪನೆ

ಉಡುಪಿ: ಜಿಲ್ಲಾಡಳಿತ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಉಡುಪಿ ಇವರ ಸಹಯೋಗದಲ್ಲಿ ಗಾಂಧಿ ಭವನ ನಿರ್ಮಾಣ ಕಾಮಗಾರಿಯ ಶಂಕುಸ್ಥಾಪನಾ ಕಾರ್ಯಕ್ರಮವು ಅಕ್ಟೋಬರ್ 2 ರಂದು ಬೆಳಗ್ಗೆ 9.30 ಕ್ಕೆ ನಗರದ ಅಜ್ಜರಕಾಡು ಭುಜಂಗಪಾರ್ಕ್ ಹತ್ತಿರ ನಡೆಯಲಿದೆ.

ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದು, ಉಡುಪಿ ಶಾಸಕ ಕೆ.ರಘುಪತಿ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ.