ಡಿ.30 ರಂದು ಉಡುಪಿಯ ನೂತನ ಅನೆಕ್ಸ್ ನ್ಯಾಯಾಲಯ ಸಂಕೀರ್ಣದ ಶಿಲಾನ್ಯಾಸ ಸಮಾರಂಭ

ಜಿಲ್ಲಾ ನ್ಯಾಯಾಂಗ, ಉಡುಪಿ ಲೋಕೋಪಯೋಗಿ ಇಲಾಖೆ, ಉಡುಪಿ ಮತ್ತು ವಕೀಲರ ಸಂಘ ಉಡುಪಿ
ಇವರ ಸಂಯುಕ್ತ ಆಶ್ರಯದಲ್ಲಿ ಉಡುಪಿಯ ನೂತನ ಅನೆಕ್ಸ್ ನ್ಯಾಯಾಲಯ ಸಂಕೀರ್ಣದ ಶಿಲಾನ್ಯಾಸ ಸಮಾರಂಭವು ಡಿ.30 ಶುಕ್ರವಾರ ದಂದು ಬೆಳಿಗ್ಗೆ 10:30 ಕ್ಕೆ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ನಡೆಯಲಿದೆ.

ಸರ್ವೋಚ್ಚ ನ್ಯಾಯಾಲಯದ ಗೌರವಾನ್ವಿತ ನ್ಯಾಯಮೂರ್ತಿ  ಎಸ್. ಅಬ್ದುಲ್ ನಜೀರ್ ಇವರು ಶಿಲಾನ್ಯಾಸ ನೆರವೇರಿಸಲಿದ್ದಾರೆ.

ಕರ್ನಾಟಕ ಉಚ್ಚ ನ್ಯಾಯಾಲಯದ ಗೌರವಾನ್ವಿತ ನ್ಯಾಯಮೂರ್ತಿ  ಪ್ರಸನ್ನ ಬಿ. ವರಾಲೆ ಅಧ್ಯಕ್ಷತೆ ವಹಿಸಲಿದ್ದಾರೆ.

ಗೌರವಾನ್ವಿತ ನ್ಯಾಯಮೂರ್ತಿ  ಬಿ. ವೀರಪ್ಪ ನ್ಯಾಯಮೂರ್ತಿಗಳು, ಕರ್ನಾಟಕ ಉಚ್ಚ ನ್ಯಾಯಾಲಯ ಹಾಗೂ ಕಾರ್ಯನಿರ್ವಾಹಕ ಅಧ್ಯಕ್ಷರು, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಬೆಂಗಳೂರು
ಗೌರವಾನ್ವಿತ ನ್ಯಾಯಮೂರ್ತಿ  ಎಸ್. ಜಿ. ಪಂಡಿತ್ ನ್ಯಾಯಮೂರ್ತಿಗಳು, ಕರ್ನಾಟಕ ಉಚ್ಚ ನ್ಯಾಯಾಲಯ, ಬೆಂಗಳೂರು ಇವರು ಉಪಸ್ಥಿತರಿರಲಿದ್ದಾರೆ.

ಗೌರವಾನ್ವಿತ ನ್ಯಾಯಮೂರ್ತಿ ಪ್ರದೀಪ್ ಸಿಂಗ್ ಯೆರೂರ್ ನ್ಯಾಯಮೂರ್ತಿಗಳು, ಕರ್ನಾಟಕ ಉಚ್ಚ ನ್ಯಾಯಾಲಯ ಹಾಗೂ ಉಡುಪಿ ಜಿಲ್ಲಾ ಆಡಳಿತಾತ್ಮಕ ನ್ಯಾಯಮೂರ್ತಿಗಳು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳಾದ  ವಿಶ್ವಜಿತ್ ಶೆಟ್ಟಿ, ಸಿ. ಎಂ. ಜೋಶಿ,
ಟಿ.ಜಿ. ಶಿವಶಂಕರೇಗೌಡ, ಬಂದರು ಮತ್ತು ಒಳನಾಡು ಜಲ ಸಾರಿಗೆ ಸಚಿವ ಎಸ್. ಅಂಗಾರ, ಕಾನೂನು, ಸಂಸದೀಯ ವ್ಯವಹಾರ ಸಚಿವ ಜೆ.ಸಿ. ಮಾಧುಸ್ವಾಮಿ, ಕರ್ನಾಟಕ ಉಚ್ಚ ನ್ಯಾಯಾಲಯದಮುಖ್ಯ ವಿಲೇಖನಾಧಿಕಾರಿ ಮುರಳೀಧರ ಪೈ ಬಿ ವಿಶೇಷ ಆಹ್ವಾನಿತರಾಗಿ ಭಾಗವಹಿಸಲಿದ್ದಾರೆ.

ಕಾಂತರಾಜು ಬಿ.ಟಿ. ಮುಖ್ಯ ಅಭಿಯಂತರರು,(ಸಂ. ಮತ್ತು ಕ.) ಲೋಕೋಪಯೋಗಿ ಇಲಾಖೆ, ಕೇಂದ್ರ ವಲಯ, ಶಿವಮೊಗ್ಗ, ರೆನೋಲ್ಡ್ ಪ್ರವೀಣ್ ಕುಮಾರ್ ಪ್ರಧಾನ ಕಾರ್ಯದರ್ಶಿ, ವಕೀಲರ ಸಂಘ ಉಡುಪಿ
ಶಾಂತವೀರ ಶಿವಪ್ಪ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು, ಬಿ. ನಾಗರಾಜ್ ಅಧ್ಯಕ್ಷರು, ವಕೀಲರ ಸಂಘ, ಉಡುಪಿ ಕಾರ್ಯಕಾರಿ ಸಮಿತಿ ಸದಸ್ಯರು ಹಾಗೂ ಸರ್ವ ಸದಸ್ಯರು ಹಾಜರಿರಲಿದ್ದಾರೆ.